Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ ಆರಂಭ*
  • *ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶ : ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ*
  • *ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ*
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶ : ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶ : ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ*

ಮೇ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 12 : ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಶೇ.50 ಕ್ಕಿಂತಲೂ ಕಡಿಮೆ ಮಳೆ ಆಗಿದೆ. ಆದರೂ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸ್ಥಳೀಯ ಎಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ಸಭೆ ನಡೆಸಬೇಕಿದ್ದು, ಆ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿಯೂ ಸಹ ಸಭೆ ನಡೆಸಿ ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರವಹಿಸಲು ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು. ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ ಸುಸ್ಥಿತಿ ಬಗ್ಗೆ ವರದಿ ನೀಡಬೇಕು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರವಿದ್ದು, ತಾಲ್ಲೂಕು ಮಟ್ಟದಲ್ಲಿಯೂ ಸಹ ಸಹಾಯವಾಣಿ ಕೇಂದ್ರ ಆರಂಭಿಸಬೇಕು. ಮಳೆಗಾಲದ ಅವಧಿಯಲ್ಲಿ ಸಹಾಯವಾಣಿ ಕೇಂದ್ರದಲ್ಲಿ ದಿನದ 24 ಗಂಟೆ ಅವಧಿಯಲ್ಲಿ ಮೂರು ಪಾಳಿಯಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈಗಾಗಲೇ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ(ಜಿಎಸ್‌ಐ) ನೀಡಿರುವ ಮಾಹಿತಿಯಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಪೌರಾಡಳಿತ, ನಗರಾಭಿವೃದ್ಧಿ, ಸೆಸ್ಕ್, ಅರಣ್ಯ, ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಾನಿ ಸಂಬAಧಿಸಿದAತೆ ಆಯಾಯ ಸಂದರ್ಭದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ರಸ್ತೆ ಬದಿ ಮರ ಬೀಳುವುದು, ವಿದ್ಯುತ್ ಕಂಬ ಬದಲಿಸುವುದು, ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಪ್ರವಾಹ ಪೀಡಿತ ಹಾಗೂ ಸೂಕ್ಷö್ಮ ಪ್ರದೇಶದಲ್ಲಿನ ಕುಟುಂಬಗಳ ಬಗ್ಗೆ ಮಾಹಿತಿ ಇರಬೇಕು. ಹೆಚ್ಚಿನ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್ ಸಂಸ್ಥೆ, ಮಾಜಿ ಸೈನಿಕರು, ಸ್ವಯಂ ಪ್ರೇರಣೆಯಿಂದ ಪ್ರಾಕೃತಿಕ ವಿಕೋಪ ನಿರ್ವಹಣಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರ ಸಹಕಾರವನ್ನು ಪಡೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಕಾಳಜಿ ಕೇಂದ್ರದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಮತ್ತಿತರ ಮೂಲ ಸೌಲಭ್ಯ ಇರಬೇಕು ಎಂದು ಅವರು ಹೇಳಿದರು. ಕೆಲವು ಸಂದರ್ಭದಲ್ಲಿ ಮಾರುತಗಳ ಅಲೆಯಿಂದಾಗಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆಯು ಸಹ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದರು.
ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಅಗತ್ಯ ಔಷಧಿ ದಾಸ್ತಾನು ಇರಬೇಕು ಎಂದರು.
‘ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸಂದೇಶಗಳು ಹೋಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜನ-ಜಾನುವಾರು ರಕ್ಷಣೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಮಾತನಾಡಿ ಈಗಾಗಲೇ ಪೊಲೀಸ್ ಇಲಾಖೆಯಿಂದ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಅಗ್ನಿಶಾಮಕ, ಅರಣ್ಯ, ವಿದ್ಯುತ್ ಇಲಾಖೆ ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಸ್ಥಳೀಯವಾಗಿ ಪೊಲೀಸ್ ಠಾಣಾ ಅಧಿಕಾರಿ ಜೊತೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಅವರು ಕೋರಿದರು. ಮಳೆಗಾಲದಲ್ಲಿ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಗಂಬೂಟ್, ಲೈಪ್ ಜಾಕೇಟ್, ಟಾರ್ಚ್, ಮತ್ತಿತರ ವಸ್ತುಗಳು ಜೊತೆಯಲ್ಲಿ ಇರಬೇಕು. ಜೆಸಿಬಿ, ಕ್ರೇನ್, ಜೀಪು, ಮತ್ತಿತರ ಸಂಬoಧ ಸ್ಥಳೀಯವಾಗಿ ವಾಹನ ಮಾಲೀಕರ ದೂರವಾಣಿ ಸಂಖ್ಯೆಗಳನ್ನು ಜತನ ಮಾಡಿಕೊಂಡಿರಬೇಕು. ನೋಡಲ್ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಬೇಕು ಎಂದರು. ‘ಜಿ.ಪo.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಮಾತನಾಡಿ ಈ ಬಾರಿ ಕೊಡಗು ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆಯಾಗಿದೆ. ಒಂದು ರೀತಿ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಒಂದು ಕಡೆ ಅನಾವೃಷ್ಠಿ, ಮುಂದಿನ ದಿನಗಳಲ್ಲಿ ಅತೀವೃಷ್ಠಿಯೂ ಸಂಭವಿಸಬಹುದು. ಹೀಗೆ ಎರಡರ ಬಗ್ಗೆಯೂ ಸಹ ಅವಲೋಕನ ಮಾಡಬೇಕಿದೆ ಎಂದು ಅವರು ತಿಳಿಸಿದರು.’ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸಿ, ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸಂಜನಾ, ಶ್ರೀಧರ, ಸೆಸ್ಕ್ ಇಇ ರಾಮಚಂದ್ರ, ಲೋಕೋಪಯೋಗಿ ಇಲಾಖೆ ಇಇ ಕೆ.ಟಿ.ಪ್ರಭು, ಜಿ.ಪಂ.ಇಇ ಜಿ.ಕೆ.ನಾಯಕ್, ಪೊಲೀಸ್ ಇನ್ಸ್ಪೆಕ್ಟರ್ ಐ.ಪಿ.ಮೇದಪ್ಪ, ತಾ.ಪಂ.ಇಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಹಲವು ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ ಆರಂಭ*

ಮೇ 12, 2026

*ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ*

ಮೇ 12, 2026

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶ : ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ*

ಮೇ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 12 : ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ…

*ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ*

ಮೇ 12, 2026

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.