Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಡಿಕೇರಿಯಂಡ ಸುಬ್ಬಯ್ಯ ಅವರಿಗೆ ರಾಣಿ ಅಯ್ಯಪ್ಪ ಪ್ರಶಸ್ತಿ ಪ್ರದಾನ*
  • *ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಆರಂಭ*
  • *ಮೇ-ಜೂನ್ ತಿಂಗಳ ಪಡಿತರ ಆಹಾರಧಾನ್ಯ ಮುಂಗಡ ವಿತರಣೆ* 
  • *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
  • *ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ : 53 ಗಂಟೆಗಳ ಸತ್ಯಾಗ್ರಹ : ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣರಿಗೆ ಮನವಿ ಸಲ್ಲಿಸಿದ ಎನ್.ಯು.ನಾಚಪ್ಪ*
  • *ಡಾ.ಎಂ.ಪಿ.ಸೋನಿಯಾಗೆ ಅಗದ ತಂತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್*
  • *ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*
  • *ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*
  • *ಮೇ 15 ರಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*

ಮೇ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ವತಿಯಿಂದ ಇಲಾಖಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್.ಆರ್ ಅವರು ಕಾರ್ಯ ಉದ್ಘಾಟಸಿ ಮಾತನಾಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅವರಿಗೆ ರಕ್ಷಣೆ, ಭದ್ರತೆ ಒದಗಿಸಲು ಇರುವ ಯೋಜನಾ ಘಟಕವಾಗಿದ್ದು, ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‍ಗೆ ಭೇಟಿ ನೀಡಿ ದೂರನ್ನು ಸಲ್ಲಿಸಬಹುದು. ಇಲ್ಲ 24*7 ಕರ್ತವ್ಯ ನಿರ್ವಹಿಸುತ್ತಿದ್ದು, ತುರ್ತು ರಕ್ಷಣೆ ಮತ್ತು ಆಶ್ರಯ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ವೈದ್ಯಕೀಯ ನೆರವು: ಆಸ್ಪತ್ರೆಗೆ ದಾಖಲು ಮತ್ತು ಚಿಕಿತ್ಸೆ. ಕಾನೂನು ನೆರವು: ಎಫ್‍ಐಆರ್ ದಾಖಲಿಸಲು ಮತ್ತು ಕಾನೂನು ಸಲಹೆ, ಆಪ್ತ ಸಮಾಲೋಚನೆ ಮಾನಸಿಕ ಸ್ಥೈರ್ಯ ತುಂಬಲು, 24*7 ಸಹಾಯವಾಣಿ 181 ಮಹಿಳಾ ಸಹಾಯವಾಣಿಯ ಮೂಲಕ ಸಂಪರ್ಕ ದೂರು ನೀಡಿ ಸಹಾಯ ಪಡೆದುಕೊಳ್ಳಬಹುದು. 112 ತುರ್ತು ಸಹಾಯವಾಣಿಯಾಗಿದ್ದು ನಿಮಗೆ ಅಗತ್ಯವಿರುವಾಗ ತುರ್ತು ಕರೆಯನ್ನು ಮಾಡಿ ರಕ್ಷಣೆಯನ್ನು ಪಡೆದುಕೊಳ್ಳುಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ) ಎಂಬುದು ಭಾರತ ಸರ್ಕಾರದ ಒಂದು ಮಹತ್ವದ ರಾಷ್ಟ್ರೀಯ ಅಭಿಯಾನವಾಗಿದ್ದು, ಕುಸಿಯುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸರಿಪಡಿಸಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶವಾಗಿದೆ. ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅತೀ ಅವಶ್ಯಕವಾಗಿದ್ದು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಹಾಗೂ ಸುತ್ತಲಿನ ವಾತವರಣವನ್ನು ಗಮನಿಸುವಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ. ಹೆಚ್ಚಿನ ಆಸಕ್ತಿಯನ್ನು ಶಿಕ್ಷಣಕ್ಕೆ ನೀಡಿ ಎಂದರು. ಅಕ್ಕಪಡೆ (ಅಕ್ಕ ಫೋರ್ಸ್) ಎಂಬುದು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಯೋಜನೆಯಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಇದನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯು ರಾಜ್ಯದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಕ್ಷಣದ ರಕ್ಷಣೆ ಮತ್ತು ನೆರವು ನೀಡುವ ಉದ್ದೇಶ ಹೊಂದಿದೆ. ಮಕ್ಕಳ ಸಹಾಯವಾಣಿಯು ಕರ್ನಾಟಕ ಮತ್ತು ಭಾರತದಾದ್ಯಂತ ಮಕ್ಕಳ ರಕ್ಷಣೆಗಾಗಿ ಇರುವ 1098 ಮಕ್ಕಳ ಸಹಾಯವಾಣಿಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ ಎಚ್.ಪಿ ಅವರು ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉತ್ತಮವಾದ ಮಾಹಿತಿ ಕಾರ್ಯಾಗಾರ ಹಮ್ಮಿಕೊಂಡಿದೆ. ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಅಕ್ಕ ಪಡೆ ಎಂಬ ಉತ್ತಮ ಸೇವೆಯನ್ನು ನಮಗೆ ನೀಡಿದೆ. ಇದು ಶ್ಲಾಘನೀಯ. ಇಂದು ಮಹಿಳೆಯರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಎಂದರು. ಹೆಣ್ಣು ಮಕ್ಕಳ ಬಳಿ ಮೊಬೈಲ್ ಇದ್ದಾಗ ಕಾಲೇಜಿನ ಗೇಟಿನಿಂದ ಹೊರಗೆ ಹೋದಾಗ ಉತ್ತಮ ರೀತಿಯಲ್ಲಿ ಮನೆಯನ್ನು ಸೇರುವುದು, ಮೊಬೈಲನ್ನು ದುರುಪಯೋಗ ಪಡಿಸಿಕೊಳ್ಳದೇ ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪಡೆದುಕೊಂಡು ಜೀವನವನ್ನು ಸಾಧನೆಯ ಹಂತಕ್ಕೆ ಕೊಂಡೊಯ್ಯಬೇಕು ಎಲ್ಲಾ ಸಮಸ್ಯೆಗಳಿಗೆ ಪರಿಹಾರಗಳಿದ್ದು, ಸಾಧಿಸುವ ಛಲದೊಂದಿಗೆ ಬದುಕನ್ನು ನಡೆಸಬೇಕು ಎಂದು ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳಿಗೆ ಸಹಾಯವಾಗುವಂತಹ ಉತ್ತಮ ಮಾಹಿತಿ ನೀಡಿದ್ದಾರೆ ಎಂದರು. ಅಕ್ಕಪಡೆ ಸಿಬ್ಬಂದಿಗಳು, ಕಾಲೇಜು ವಿದ್ಯಾಥಿಗಳು, ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಡಿಕೇರಿಯಂಡ ಸುಬ್ಬಯ್ಯ ಅವರಿಗೆ ರಾಣಿ ಅಯ್ಯಪ್ಪ ಪ್ರಶಸ್ತಿ ಪ್ರದಾನ*

ಮೇ 14, 2026

*ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಆರಂಭ*

ಮೇ 14, 2026

*ಮೇ-ಜೂನ್ ತಿಂಗಳ ಪಡಿತರ ಆಹಾರಧಾನ್ಯ ಮುಂಗಡ ವಿತರಣೆ* 

ಮೇ 14, 2026

*ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಆರಂಭ*

ಮೇ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು  ಮೇ 14 NEWS DESK : ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ ಉತ್ಸವಕ್ಕೆ ವಿಶೇಷ…

*ಮೇ-ಜೂನ್ ತಿಂಗಳ ಪಡಿತರ ಆಹಾರಧಾನ್ಯ ಮುಂಗಡ ವಿತರಣೆ* 

ಮೇ 14, 2026

*ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

ಮೇ 14, 2026

*ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ*

ಮೇ 14, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ : 53 ಗಂಟೆಗಳ ಸತ್ಯಾಗ್ರಹ : ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣರಿಗೆ ಮನವಿ ಸಲ್ಲಿಸಿದ ಎನ್.ಯು.ನಾಚಪ್ಪ*

ಮೇ 14, 2026

*ಡಾ.ಎಂ.ಪಿ.ಸೋನಿಯಾಗೆ ಅಗದ ತಂತ್ರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್*

ಮೇ 14, 2026

*ಮಡಿಕೇರಿ : ಮಹಿಳೆಯರು ಮತ್ತು ಮಕ್ಕಳಿಗಾಗಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ*

ಮೇ 14, 2026

*ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ*

ಮೇ 14, 2026

*ಮೇ 15 ರಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ*

ಮೇ 14, 2026

*ವಿರಾಜಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವಲಯಗಳಿಗೆ ನೂತನ ಅಧ್ಯಕ್ಷರುಗಳ ನೇಮಕ*

ಮೇ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.