

ಮಡಿಕೇರಿ NEWS DESK ಮೇ 15 : ಶಾಸಕರಾಗಿ ಅಧಿಕಾರ ವಹಿಸಿಕೊಂಡು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಮುಖರು ಹಾಗೂ ಹಲವು ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಜನಪರ ಕಾರ್ಯಗಳನ್ನು ಶ್ಲಾಘಿಸಲಾಯಿತು. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತಷ್ಟು ವೇಗವಾಗಿ ಸಾಗಲಿ ಎಂದು ಆಶಿಸಲಾಯಿತು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಂಸ ಹೆಚ್.ಎ, ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷೆ ಶಾಂತೆಯಂಡ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಹರಿಪ್ರಸಾದ್ ಕೋಚನ ಪ್ರಮುಖರಾದ ಮೂವ್ವನ ಕೀರ್ತನ್, ರೂಪ ಸುಬ್ಬಯ್ಯ, ಲತೀಫ್ ಸುಂಟಿಕೊಪ್ಪ, ಉಳುವಾರನ ಪವಿತ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಖಲೀಲ್ ಬಾಷ, ಆರ್.ಪಿ.ಚಂದ್ರಶೇಖರ್, ಸದಾಮುದ್ದಪ್ಪ, ಸುಬ್ರಮಣಿ, ಮುದ್ದುರಾಜು, ಶರಣು ಮತ್ತಿತರರು ಉಪಸ್ಥಿತರಿದ್ದರು.









