Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಚಾಲನೆ

ಮೇ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 15 NEWS DESK : ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ರಾಜಸೀಟು ಉದ್ಯಾನವನ ಪುಟಾಣಿ ರೈಲು ವಿಭಾಗದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ರವಾಸಿಗರಿಗೆ ಶುದ್ಧ ಹಾಗೂ ಗುಣಮಟ್ಟದ ಆಹಾರ ಪೂರೈಸುವುದು ಉದ್ದೇಶವಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಪರಿಸರ ಶುಚಿತ್ವಕ್ಕೆ ಒತ್ತು ನೀಡುವುದು ಆದ್ಯತೆಯಾಗಿದೆ. ಪುಟಾಣಿ ರೈಲು ಮಾರ್ಗದಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕರು ಹೇಳಿದರು. ಪುಟಾಣಿ ರೈಲು ಸಂಬಂಧ ದಕ್ಷಿಣ ಭಾಗದ ನೈರುತ್ಯ ರೈಲ್ವೆ ವಿಭಾಗದವರು ವರದಿ ನೀಡಿದ್ದು, ವಿದ್ಯುತ್ ಚಾಲಿತ ಪುಟಾಣಿ ರೈಲು ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು. ಫುಡ್‍ಕೋರ್ಟ್ ಕಾಮಗಾರಿಯು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಪ್ರವಾಸಿಗರ ಅನುಕೂಲಕ್ಕೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ರಾಜಸೀಟು ಉದ್ಯಾನವನಕ್ಕೆ ಪ್ರತೀ ವರ್ಷದ 65 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದು, ರಾಜಸೀಟನ್ನು ಅಭಿವೃದ್ಧಿ ಪಡಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಪುಟಾಣಿ ರೈಲು ಜಾಗಕ್ಕೆ ಯಾವುದೇ ರೀತಿಯಲ್ಲಿ ದಕ್ಕೆ ಆಗದಂತೆ ಫುಡ್‍ಕೋರ್ಟ್ ನಿರ್ಮಾಣ ಮಾಡಬೇಕು. ಪರಿಸರ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ರಾಜಾಸೀಟು ಉದ್ಯಾನವನ ವೀಕ್ಷಣೆಗೆ ರಾಷ್ಟ್ರದ ವಿವಿಧ ಕಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ರಾಜಸೀಟನ್ನು ಮತ್ತಷ್ಟು ಆಕರ್ಷಣೆಗೊಳಿಸುವಲ್ಲಿ ಪ್ರಯತ್ನಗಳು ನಡೆದಿವೆ ಎಂದು ತಿಳಿಸಿದರು. ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರು ಮಾತನಾಡಿ ಮಡಿಕೇರಿ ನಗರದ ಅಭಿವೃದ್ಧಿಗೆ ನಗರಸಭೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮಡಿಕೇರಿ ನಗರ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಕ್ಕೆ ಸದಾ ಕೈಜೋಡಿಸಲಾಗುವುದು ಎಂದು ಹೇಳಿದರು. ನಗರಸಭೆ ಸದಸ್ಯರಾದ ಸಬಿತಾ ಅವರು ಮಾತನಾಡಿ ರಾಜಸೀಟು ಉದ್ಯಾನವನ ಮತ್ತಷ್ಟು ಹಸಿರುಮಯವಾಗಬೇಕು. ಕುಂದಗಳು, ಹೂಗಳು ಇನ್ನಷ್ಟು ಆಕರ್ಷಣೀಯವಾಗಬೇಕು. ಫಾಟ್‍ಗಳನ್ನು ಹೆಚ್ಚಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ನುಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಅರುಣ್ ಶೆಟ್ಟಿ, ಶಾರದ ನಾಗರಾಜು, ನಗರಸಭಾ ಸದಸ್ಯರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಹಾಗೂ ನಗರಸಭೆ ಪೌರಾಯುಕ್ತರು ಇತರರು ಇದ್ದರು. ತೆನ್ನಿರಾ ಮೈನಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದ್ದು, ಕದಿರು ಬಿಡುವ ಹಂತದಲ್ಲಿದ್ದ ಭತ್ತದ…

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.