
ಮಡಿಕೇರಿ NEWS DESK ಮೇ 18 : ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನದ ಅಂಗವಾಗಿ ಮಡಿಕೇರಿಯ ಜಿಲ್ಲಾ ರಕ್ತ ನಿಧಿ ಕೇಂದ್ರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ ಅವರು ರೋಗಿಯ ಜೀವ ಉಳಿಸಲು ರಕ್ತದಾನ ಅಮೂಲ್ಯ ದಾನವಾಗಿದೆ. ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ರಕ್ತದಾನ ಮಾಡಲು ಮುಂದಾಗಬೇಕು ಮತ್ತು ಇತರರಿಗೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು ಮತ್ತು ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಕ ಕ್ರಿಯೇಟಿವ್ ಖಲೀಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಭು ರೈ, ಪ್ರಧಾನ ಕಾರ್ಯದರ್ಶಿ ರಾವುಫ್ ಎಂ.ಎನ್, ಸಂಘಟನಾ ಕಾರ್ಯದರ್ಶಿ ರವಿ ಗೌಡ, ನಗರಸಭಾ ಸದಸ್ಯ ಸದಾ ಮುದ್ದಪ್ಪ, ಮಾಜಿ ಸದಸ್ಯ ಕೆ.ಯು.ಅಶ್ರಫ್, ನಗರ ಕಾಂಗ್ರೆಸ್ ಕಾರ್ಯದರ್ಶಿ ನಜೀ಼ರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಉಪಾಧ್ಯಕ್ಷ ಕತ್ತಣಿರ ಮೈಸಿ, ಉಪಾಧ್ಯಕ್ಷ ರಾಹುಲ್ ಮಾರ್ಷಲ್, ಕಾರ್ಯಕರ್ತ ಸಾಧತ್ ಹಾಗೂ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.










