Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
  • *ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
  • *ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
  • *ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
  • *ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*
  • *ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
  • *ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 18 NEWS DESK : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಅಂಗವಾಗಿ `ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತಿವೆ ಎಂಬ ಘೋಷವಾಕ್ಯದಡಿಯಲ್ಲಿ ನಾಡಿನ ಗತ ಇತಿಹಾಸವನ್ನು ಪುಷ್ಠೀಕರಿಸುವ `ಪ್ರಾಚೀನ ನಾಣ್ಯಗಳ ಪ್ರದರ್ಶನ ನಗರದ ಕೋಟೆಯ ಆವರಣದ ವಸ್ತುಸಂಗ್ರಹಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೊಡಗಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರಾದ ಡಾ.ಎಂ.ಜಿ.ಪಾಟ್ಕರ್ ಅವರ ಸಂಗ್ರಹದ ಎರಡು ಸಾವಿರಕ್ಕೂ ಹೆಚ್ಚು ನಾಣ್ಯಗಳ ಪ್ರದರ್ಶನ ಕುತೂಹಲಕಾರಿಯಾಗಿ ಮೂಡಿ ಬಂದು, ನೂರಾರು ಸಂಖ್ಯೆಯ ಜನರನ್ನು ಆಕರ್ಷಿಸಿತು. ಖ್ಯಾತ ನಾಣ್ಯ-ನೊಟು ಸಂಗ್ರಹಕಾರರಾದ ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಪ್ರಾಚೀನ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಪ್ರಾಚೀನ ನಾಣ್ಯಗಳ ಪ್ರದರ್ಶನದಿಂದ ವಿದ್ಯಾರ್ಥಿಗಳು ಪುಸ್ತಕದಲ್ಲಿ ಓದುವ ಇತಿಹಾಸವನ್ನು ಕಣ್ಣಾರೆ ನೋಡಿ ಕಲಿಯಲು ಉತ್ತಮ ವೇದಿಕೆಯಾಗಿದೆ ಎಂದರು. ಇದು ಮುಂದಿನ ಪೀಳಿಗೆಗೆ ಇತಿಹಾಸದ ವಿವಿಧ ರಾಜವಂಶಗಳ, ಲಾಂಛನಗಳ ಹಾಗೂ ಆಯಾ ಕಾಲದ ಇತಿಹಾಸವನ್ನು ಸ್ಪಷ್ಟವಾಗಿ ತಿಳಿಯಲು ಸಹಕಾರಿಯಾಗುತ್ತದೆ. ಅಲ್ಲದೇ ವಿದ್ಯಾರ್ಥಿಗಳು ಹಾಗೂ ಇತಿಹಾಸಕಾರರ ಕಲಿಕೆಗೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ, ವಸ್ತು ಸಂಗ್ರಹಾಲಯಗಳಲ್ಲಿ ಪ್ರದರ್ಶನ ನಡೆಸಲಾಗುತ್ತದೆ ಎಂದು ತಿಳಿಸಿದರು. ಈ ಹಿಂದೆ ತಾನು ನಾಣ್ಯ ಮತ್ತು ನೋಟುಗಳ ಪ್ರದರ್ಶನ ನಡೆಸುತ್ತಿದ್ದು, ಈ ಬಾರಿ ನಾಡಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರೂ ಆಗಿರುವ ಡಾ.ಎಂ.ಜಿ.ಪಾಟ್ಕರ್ ಮತ್ತು ವಿಜಯಲಕ್ಷೀ ಪಾಟ್ಕರ್ ಅವರು ಸಂಗ್ರಹದ ನಾಣ್ಯಗಳ ಪ್ರದರ್ಶನ ನಡೆಸಲಾಗುತ್ತಿದೆ. ಇಲ್ಲಿ ಕ್ರಿಸ್ತ ಪೂರ್ವ 6ನೇ ಶತಮಾನದಲ್ಲಿ ಚಲಾವಣೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್‍ಮಾರ್ಕ್ ನಾಣ್ಯಗಳು, ಗ್ರೀಕ್, ರೋಮನ್, ಕುಶಾನರು, ಗುಪ್ತ ಸಾಮ್ರಾಜ್ಯ, ಶಾತವಾಹನ, ಕ್ಷತ್ರಪ, ಚೋಳಾ, ಪಲ್ಲವ, ಪಾಂಡ್ಯ, ವಿದೇಶಿ ಆಕ್ರಮಣಕಾರರ, ಬ್ರಿಟೀಷರ ನಾಣ್ಯಗಳು, ಸ್ವಾತಂತ್ರ್ಯ ಪೂರ್ವ, ನಂತರದ ತಾಮ್ರ, ಬೆಳ್ಳಿ, ಚಿನ್ನ, ಸೀಸ, ಹಿತ್ತಾಳೆ, ಕಂಚಿನ ನೂರಾರು ನಾಣ್ಯಗಳು ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ ಎಂದು ಹೇಳಿದರು. ನಾಡಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರೂ ಆಗಿರುವ ಡಾ.ಎಂ.ಜಿ.ಪಾಟ್ಕರ್ ಮತ್ತು ವಿಜಯಲಕ್ಷೀ ಪಾಟ್ಕರ್, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ.ರೇಖಾ ಹಾಗೂ ಸಿಬ್ಬಂದಿಗಳು ಇದ್ದರು. ಕರ್ನಾಟಕದ ನಾಣ್ಯಗಳು: ಗಂಗ, ಕದಂಬ, ಚಾಲುಕ್ಯ, ಹೊಯ್ಸಳ, ಕಾಕತೀಯ, ಯಾದವ, ವಿಜಯನಗರದ ಹರಿಹರ, ದೇವರಾಯ, ಕೃಷ್ಣ ದೇವರಾಯ, ಅಚ್ಚುತರಾಯ, ಶ್ರೀರಂಗರಾಯ, ಸದಾಶಿವರಾಯ ಇತರೆ ಅರಸರು. ಮೈಸೂರಿನ ದಿವಾನ್ ಪೂರ್ಣಯ್ಯ, ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ನಾಣ್ಯಗಳು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19…

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*

ಮೇ 18, 2026

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 2026

*ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

ಮೇ 18, 2026

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.