
ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿದ್ದು, ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗಗಳಿಂದ ಸರಬರಾಜಾಗುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.
ಪೊನ್ನಂಪೇಟೆ :: ಪೊನ್ನಂಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಫ್13 ಹೈಸೊಡ್ಲೂರು, ಎಫ್11-ತಿತಿಮತಿ ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನೋಕ್ಯ, ತಿತಿಮತಿ, ಸೀಗೆತೋಡು,ಚೆನ್ನಂಗೋಲಿ, ಕಲ್ಲಳ್ಳ, ಹೆಬ್ಬಾಲೆ, ದೇವರಪುರ, ಮರೂರು, ಅಕ್ಕಿಮಾಳ, ಕನ್ನಂಬಾಡಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
20 ರಂದು ವಿದ್ಯುತ್ ವ್ಯತ್ಯಯ :: 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲದ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಹಾಗೂ ಎಫ್11 ಗಾಳಿಬೀಡು ಫೀಡರ್‍ನಲ್ಲಿ ಮೇ, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.







