
ಮಡಿಕೇರಿ NEWS DESK ಮೇ 24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿ ಮೇ 27 ರಂದು ಮಡಿಕೇರಿಯ ಮಹದೇವಪೇಟೆಯಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಕಚೇರಿಯನ್ನು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮೈಸೂರು ಘಟಕದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









