
ಮಡಿಕೇರಿ NEWS DESK ಮೇ 24 : ಸಮಾಜದಲ್ಲಿ ಕೋಮು ಪ್ರಚೋದನೆ, ದ್ವೇಷ ಭಾಷಣ, ಗಲಭೆ ಸೃಷ್ಟಿ ಹಾಗೂ ಗೋ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ನಡೆಸಿರುವ ಪುನರಾವರ್ತಿತ ಅಪರಾಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್.ಡಿ.ಪಿ.ಐ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 11:30 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.









