
ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಸುಂಟಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.









