Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*
  • *ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*
  • *ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
  • *ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*

ಮೇ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 28 : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಮೇ 30 ರಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ರೂಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್ 2025ರಲ್ಲಿ ಕನಿಷ್ಠ ವೇತನದ ಕರಡು ಅಧಿಸೂಚನೆ ಹೊರಡಿಸಲಾಗಿದ್ದರೂ, ಇಲ್ಲಿಯವರೆಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ರಾಜ್ಯದಲ್ಲಿನ ಕಾರ್ಮಿಕರಿಗೆ ನೀಡಬೇಕಾದ ವೈಜ್ಞಾನಿಕ ರೂಪದ ಕನಿಷ್ಠ ವೇತನವನ್ನು ಅಂತಿಮಗೊಳಿಸಿಲ್ಲ. 2017ರ ನಂತರ 9 ವರ್ಷಗಳಿಂದ ಪುನರ್ವಿಮರ್ಶೆಯಾಗದಿರುವ ಕನಿಷ್ಠ ವೇತನವನ್ನು ಪೂರ್ವಾನ್ವಯವಾಗುವಂತೆ, ತುಟ್ಟಿಭತ್ಯೆಯೊಂದಿಗೆ, ವಲಯ 3ರಲ್ಲಿನ ಅಕುಶಲ ಕಾರ್ಮಿಕರಿಗೆ ಮಾಸಿಕ ರೂ.31 ಸಾವಿರದಂತೆ ನಿಗದಿ ಮಾಡಬೇಕು. ಪ್ರಕಟಿತ ಕನಿಷ್ಠ ವೇತನಕ್ಕಿಂತಲೂ ಕಡಿಮೆ ವೇತನ ಪಡೆಯುವ ಸರಕಾರಿ, ಖಾಸಗಿ ವಲಯಗಳಲ್ಲಿ, ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ನೌಕರರು ಹಾಗೂ ಎಲ್ಲಾ ಸ್ವರೂಪದ ಬಾಹ್ಯಮೂಲ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಕಾರ್ಮಿಕ ಸಂಹಿತೆಗಳಿಗೆ ಕಾರ್ಮಿಕರ ಪರವಾಗಿ ರಾಜ್ಯ ಸರಕಾರದ ತಿದ್ದುಪಡಿಗಳ ನಂತರವೇ ನಿಯಮಾವಳಿಗಳನ್ನು ರೂಪಿಸಿ ಜಾರಿಗೆ ತರಬೇಕು. ಖಾಯಂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ಹಾಗೂ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊoಡು ಶನಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪಿ.ಆರ್.ಭರತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಅಧ್ಯಕ್ಷ ಎ.ಸಿ.ಸಾಬು, ಉಪಾಧ್ಯಕ್ಷ ಕೆ.ಕೆ.ಹರಿದಾಸ್, ಸರಕಾರಿ ಆಸ್ಪತ್ರೆ ಸ್ವಚ್ಛತಾ ನೌಕರರ ಸಂಘದ ಅಧ್ಯಕ್ಷೆ ಹೆಚ್.ಕೆ.ಜಾನಕಿ, ಗ್ರಾ.ಪಂ ನೌಕರರ ಸಂಘದ ಕುಶಾಲನಗರ ತಾಲ್ಲೂಕು ಕಾರ್ಯದರ್ಶಿ ಹೆಚ್.ಎಂ.ದಿನೇಶ್, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಸಂಘದ ಪ್ರಮುಖರಾದ ಇಂದಿರಾ ಕೆ.ಸಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 2026

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 2026

*ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*

ಮೇ 28, 2026

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ…

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 2026

*ಕರಿಕೆ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ*

ಮೇ 28, 2026

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.