Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*

ಮೇ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 29 NEWS DESK :  ಅನ್ಯ ಭಾಷೆ ಹೊಂದಿರುವ ಮಕ್ಕಳಲ್ಲಿ ಬೋಧಕರು ನೈಜ ಭಾಷೆಯ ಮನೋಭಾವನೆ ಬರುವಂತೆ ನೋಡಿಕೊಂಡು ಬೋಧಿಸಬೇಕಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ದಲಿತ ಸಾಹಿತ್ಯ ಪರಿಷತ್ ನುಡಿ ಉತ್ಸವ ಮತ್ತು ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಡಿ ಪ್ರದೇಶಗಳ ಪಠ್ಯ ಕ್ರಮದಲ್ಲಿ ಕನ್ನಡ ಭಾಷ ನೀತಿ ಹಾಗೂ ಬಹುಭಾಷ ವಾಸ್ತವಿಕತೆಗಳ ಮರುಚಿಂತನೆ ಎನ್ನುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಕನ್ನಡ ಭಾಷೆ ಸಾವಿರಾರು ವರ್ಷದ ಇತಿಹಾಸ ಇರುವ ಭಾಷೆ. ಇದಕ್ಕೆ 2008 ರಲ್ಲಿ ಶಾಸ್ತ್ರೀಯ ಸ್ಥಾನ ಬಂದಿರುವುದು ಹೆಮ್ಮೆ ಗೌರವ ಎಂದು ಹೇಳಿಕೊಂಡರೆ ಸಾಲದು. ಈ ಪುರಾತನ ಭಾಷೆಯಲ್ಲಿ ಸಾಹಿತ್ಯ, ಪರಂಪರೆ, ಸಂಸ್ಕೃತಿ, ಆಚಾರ-ವಿಚಾರ ಆಳವಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ಆಗಬೇಕು. ಇಂದು ಆಯೋಜಿಸಿರುವ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದು ನಮ್ಮ ಸಾಹಿತ್ಯ ಪರಂಪರೆ ಸಂಸ್ಕೃತಿ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ವಿಚಾರ ಸಂಕಿರಣವಾಗಿದೆ ಎಂದರು. ನುಡಿ ಎನ್ನುವುದು ನಮ್ಮ ನಮ್ಮ ಸಂಕೇತ ಅದು ಸಂಸ್ಕೃತಿ ಪರಂಪರೆ ಮೌಲ್ಯಗಳನ್ನು ತಾರಕಕ್ಕೆ ಕೊಂಡ್ಯೊಯುತ್ತದೆ. ನಮ್ಮ ಎಲ್ಲಾ ವಿದ್ಯಾಲಯದ ಕನ್ನಡ ಪ್ರಾಧ್ಯಪಕರು ಈ ರೀತಿಯ ಕಾರ್ಯಕ್ರಮ ಆಯೋಜಿಸಿದರೆ ನಮ್ಮ ಪರಂಪರೆ ಪದ್ದತಿಯನ್ನು ಬಿಂಬಿಸಲು ಸಹಕಾರಿಯಾಗುತ್ತದೆ. ಕೊಡಗು ಎರಡು ರಾಜ್ಯವನ್ನು ಬೆಸೆಯುವ ಮತ್ತು ಭಾಷೆಯ ಸಂಗಮ ಭೂಮಿಯಾಗಿದೆ. ಈ ಸಂಸ್ಕೃತಿಯ ಸಂದ್ಯ ಜಾಗದಲ್ಲಿ ಸಹಬಾಳ್ವೆಯನ್ನು ಅರ್ಥಪೂರ್ಣವಾಗಿ ಕಟ್ಟಿ ಕೊಡುವ ಸಾಮರ್ಥ್ಯ ಕನ್ನಡಕ್ಕೆ ಇದೆ. ಜೊತೆಗೆ ನಮ್ಮ ರಾಜ್ಯದಲ್ಲಿ ಕನ್ನಡದಲ್ಲಿ ವೈವಿದ್ಯಮಯ ಭಾಷೆಗಳಿದ್ದು ಅದನ್ನು ಅರಿತು ಬೋಧಕರು ಬೋಧಿಸಬೇಕು .ಕನ್ನಡ ಭಾಷೆಯನ್ನು ಬಲ ಪಡಿಸುವುದೆಂದರೆ ಅದು ಬೇರೆ ಭಾಷೆಯನ್ನು ವಿರೋಧಿಸುವುದಲ್ಲ. ಅನ್ಯ ಭಾಷೆಯನ್ನು ಗಡಿನಾಡಿನಲ್ಲಿ ಪಠ್ಯದಲ್ಲಿ ಸೇರಿಸಬೇಕು, ಬದಲಾವಣೆ ಆಗಬೇಕು ಎಂಬ ವಿಚಾರ ಸಂಕಿರಣದಲ್ಲಿ ಮೂಡಿ ಬರುವ ಚಿತಂನೆಯನ್ನು ಕಾರ್ಯರೂಪಕ್ಕೆ ತರಬೇಕು. ಗಡಿಯಲ್ಲಿ ವಿಭಿನ್ನ ಭಾಷೆಯ ಮಕ್ಕಳಿರುತ್ತಾರೆ. ಕಲಿಕೆಗೆ ಯಾವ ಭಾಷೆ ಎನ್ನುವ ಗೊಂದಲ ಇರುತ್ತದೆ. ಅಗತ್ಯ ಭಾಷೆ ಕಲಿಕೆಗೆ ನಾವು ಅವಕಾಶ ಮಾಡಿಕೊಡಬೇಕು. ಬಹು ಭಾಷೆಯಲ್ಲಿ ತರಗತಿಯನ್ನು ನಿಭಾಯಿಸುವ ಜವಬ್ದಾರಿ ಶಿಕ್ಷಕರದ್ದಾಗಿದೆ ಎಂದು ಡಾ ಅಶೋಕ ಸಂಗಪ್ಪ ಆಲೂರ ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ದ ಸಾ ಪ ನುಡಿ ಉತ್ಸವ ಸಮಿತಿ ಅಧ್ಯಕ್ಷ ಅರ್ಜುನ್ ಮೌರ್ಯ, ಕಳೆದ ನವೆಂಬರ್ ನಿಂದ ಈ ಸಾಲಿನ ನವಂಬರ್ ವರಗೆ 19 ಕಾರ್ಯಕ್ರಮ ನಡೆಸುವ ಉದ್ದೇಶ ಇದ್ದು 4 ಸಾರ್ವಜನಿಕ ಮತ್ತು ಉಳಿದವು ಕಾಲೇಜು ಮಟ್ಟದಾಗಿದೆ.ಇಲ್ಲಿ ಗಡಿನಾಡಿನಲ್ಲಿ ಪಠ್ಯ ಕ್ರಮದಲ್ಲಿ ಕನ್ನಡ ಉಪನ್ಯಾಸಕರು ಬೋಧಕರು ಅನ್ಯ ಭಾಷಿಕರಿಗೆ ಬೋಧನೆಯಲ್ಲಿ ಬದಲಾವಣೆ ಅಗತ್ಯ ಮತ್ತು ಈ ನಿಟ್ಟಿನಲ್ಲಿ ಬದಲಾವಣೆಯ ಆಗತ್ಯ ಏಕೆ ಎಂಬುದರ ಕುರಿತು ಚರ್ಚಿಸಲು ಇಂದಿನ ಈ ಸಂಕಿರಣ ಆಯೋಜಿಸಲಾಗಿದೆ. ಈ ಚರ್ಚೆ ಮೂಲಕ ಪಠ್ಯದಲ್ಲಿನ ಬದಲಾವಣೆ ಬಗ್ಗೆ ಸರಕಾರದ ಮಟ್ಟಕ್ಕೂ ತಲುಪಿಸುವ ಉದ್ದೇಶವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ವಿದ್ಯಾ ಸಂಸ್ಥೆ ಗೋಣಿಕೊಪ್ಪ ಇದರ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ ಮಾತನಾಡಿದರು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ.ಜಿ.ವೀಣಾ ಉಪಸ್ಥಿತರಿದ್ದರು. ವಿರಾಜಪೇಟೆ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಇಂದಿನ ವಿಚಾರ ಸಂಕಿರಣದ ಆಯೋಜಕರಾದ ಬಿ ಬಿ ಸುನಿಲ್ ಕುಮಾರ್ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪವಿತ್ರ ನಿರೂಪಿಸಿದರು. ಗೋಣಿಕೊಪ್ಪ ಕಾವೇರಿ ಕಾಲೇಜಿನ ಕನ್ನಡ ಉಪನ್ಯಾಸಕ ಲೆ ಡಾ ಅಕ್ರಮ್ ವಂದಿಸಿದರು. ಈ ಸಂದರ್ಭದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರುಗಳು,ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ಪ್ರಾದ್ಯಾಪಕರು, ಶಿಕ್ಷಕರು,ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*

ಸೆಪ್ಟೆಂಬರ್ 14, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.14: ಪವಿತ್ರ ಈದ್ ಮಿಲಾದ್ ಅಂಗವಾಗಿ UmmathOne Kodagu Charitable Trust (R.) ವತಿಯಿಂದ “ಮಾನವ…

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.