
ಮಡಿಕೇರಿ ಮೇ 29 NEWS DESK : ವಿಶ್ವ ಪರಿಸರ ದಿನಾಚರಣೆ-2026 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ “ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಜೂ.2 ರಂದು ಬೆಳಗ್ಗೆ 09.30 ಗಂಟೆಗೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆ ವಿಭಾಗದ ಜಿಮ್ನಾಸ್ಟಿಕ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. (ಈ ಸ್ಫರ್ದೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮತ್ತು ಪ್ರಬಂಧ ಬರೆಯುವ ಹಾಳೆಯನ್ನು ಮಾತ್ರ ನೀಡಲಾಗುವುದು). ಚಿತ್ರಕಲೆ ಹಾಗೂ ಪ್ರಬಂಧ ಬರೆಯಲು ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು). ಸ್ಪರ್ದೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಈ ವರ್ಷದ ಘೋಷಣ ವಾಕ್ಯವು “ಪ್ರಕೃತಿಯಿಂದ ಸ್ಪೂರ್ತಿ. ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ.” “Inspired by Nature. For Climate. For Our Future” ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 08272-221855, 7760738447, 6361713238 ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಕಚೇರಿ-ಕೊಡಗು ಪರಿಸರ ಅಧಿಕಾರಿ ತಿಳಿಸಿದ್ದಾರೆ.








