
ಮಡಿಕೇರಿ NEWS DESK ಜೂ.1 : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಸಮಾಜ ಒತ್ತಾಯಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಗು ಗೌಡ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಬರೆದಿರುವ ಪತ್ರದ ಸಾರಾಂಶ ಹೀಗಿದೆ >>> ಕೊಡಗಿನ ಜನತೆಯ ಆಕಾಂಕ್ಷೆ ಹಾಗೂ ವಿಶೇಷವಾಗಿ ಕೊಡಗಿನ ಒಕ್ಕಲಿಗ ಜನಾಂಗದ ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮುಖ್ಯಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸುಸಂದರ್ಭ ಕೊಡಗಿನ ಗೌಡರ ಪರವಾಗಿ ತಮಗೆ ಹೃತೂರ್ವಕ ಅಭಿನಂದನೆ ಸಲ್ಲಿಸುತ್ತಿದ್ದೇವೆ. 2023ನೇ ಇಸವಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮಗಳ ನೇತೃತ್ವದಲ್ಲಿ ಹಾಗೂ ತಾವು ನೀಡಿದ ನೈತಿಕ ಬಲದಿಂದಾಗಿ ಕೊಡಗಿನ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಕಾಂಗ್ರೆಸ್ ಪಕ್ಷದ ಯುವ ಅಭ್ಯರ್ಥಿಗಳು ಪ್ರಚಂಡ ವಿಜಯ ಸಾಧಿಸಿರುವುದು ಅಭ್ಯರ್ಥಿಗಳಿಗೆ ತಾವು ನೀಡಿದ ನೈತಿಕ ಸ್ಥೆರ್ಯ ಎಂಬುದು ಹೊಗಳಿಕೆಯ ಮಾತಲ್ಲ. ಶ್ರೀ ಮಂತರ್ ಗೌಡ, ಶಾಸಕರು ಮಡಿಕೇರಿ ವಿಧಾನಸಭಾ ಕ್ಷೇತ್ರ ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯವನ್ನು ಜಾತ್ಯಾತೀತವಾಗಿ ನಡೆಸುತ್ತಿರುವುದಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯ ವೀರ ಸೈನಿಕರ ಪುತ್ಥಳಿ ಮರುನಿರ್ಮಾಣ ಕಾರ್ಯ ಹಾಗೂ ಪ್ರಸ್ತುತ ಮಡಿಕೇರಿ ನಗರದಲ್ಲಿರುವ ವೀರಸೇನಾನಿಗಳ ವೃತ್ತಗಳ ಅಭಿವೃದ್ಧಿ ಹಾಗೂ ಮಡಿಕೇರಿ ಕ್ಷೇತ್ರದ ಹಳ್ಳಿಗಳ ರಸ್ತೆ, ನೀರು ಮತ್ತು ವಿದ್ಯುತ್ ಸಂಪರ್ಕ ಸುಲಲಿತವಾಗಿ ಇರುವಲ್ಲಿ ಹಾಗೂ ಅಭಿವೃದ್ಧಿಪಡಿಸುವಲ್ಲಿ ಇವರ ಶ್ರಮ ಅವಿಸ್ಮರಣೀಯ. ಈ ಅಭಿವೃದ್ಧಿ ಕಾರ್ಯ ಮುಂದುವರಿಯುವ ಅಗತ್ಯಕ್ಕಾಗಿ ತಾವು ರಚಿಸಲಿರುವ ಕರ್ನಾಟಕ ಸರಕಾರದ ನೂತನ ಮಂತ್ರಿಮಂಡಲದಲ್ಲಿ ಶ್ರೀ ಮಂತರ್ ಗೌಡ, ಶಾಸಕರು ಮಡಿಕೇರಿ ವಿಧಾನಸಭಾ ಕ್ಷೇತ್ರ ಇವರಿಗೆ ಪ್ರಮುಖ ಖಾತೆಯ ಮಂತ್ರಿ ಪದವಿ ನೀಡುವುದರೊಂದಿಗೆ ಹಲವು ವರ್ಷಗಳಿಂದ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯತೆ ಇಲ್ಲದೇ ವಂಚಿತವಾದ ಕೊರಗನ್ನು ನಿವಾರಿಸುವಂತೆ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವಂತೆ ಕೊಡಗಿನ ಗೌಡ ಜನಾಂಗದ ಪರವಾಗಿ ವಿನಂತಿಸುತ್ತೇವೆ. >>> ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ








