Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಿ : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಿ : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಆಗ್ರಹ*

ಜೂನ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.1 NEWS DESK : ಕಾಡಾನೆಗಳನ್ನು ಒಳಗೊಂಡಂತೆ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಅರಣ್ಯ ಪ್ರದೇಶಗಳಲ್ಲಿ ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಇಲಾಖೆಯನ್ನು ಒಳಗೊಂಡಂತೆ ಸರ್ಕಾರವನ್ನು ಆಗ್ರಹಿಸುವ ನಿಟ್ಟಿನಲ್ಲಿ ಜೂ.5 ರಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸುವ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹ್ಯೂಮನ್ ರೈಟ್ಸ್ ಇಂಟರ್‍ನ್ಯಾಷನಲ್ ಫೆಡರೇಷನ್ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಮುಂಭಾಗ ಪಕ್ಷ ಭೇದಗಳಿಲ್ಲದೆ ಸಮಾವೇಶಗೊಂಡು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳು, ಅರಣ್ಯ ಸಚಿವರು, ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಿದ್ದೇವೆ. ಎಲ್ಲಾ ಸಂಘ ಸಂಸ್ಥೆಗಳು, ಸಾರ್ವಜನಿಕರು ಇದನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕೊಡಗು ಜಿಲ್ಲೆಯನ್ನು ಒಳಗೊಂಡಂತೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ವಿಭಾಗಗಳಲ್ಲಿ ವನ್ಯ ಜೀವಿಗಳ ಉಪಟಳ ಹೆಚ್ಚಾಗುತ್ತಿದೆ. ಕಾಡಾನೆಗಳ ಹಾವಳಿಯಿಂದ ಜೀವಹಾನಿಯೊಂದಿಗೆ, ಫಸಲು ನಾಶ ಉಂಟಾಗಿ ಕೃಷಿಕ ಸಮೂಹ ಸಂಕಷ್ಟಕ್ಕೆ ಸಿಲುಕಿದೆ. ಹುಲಿ ದಾಳಿಯಿಂದ ಜೀವಹಾನಿಯ ಪ್ರಕರಣಗಳು ಸಾಕಷ್ಟು ನಡೆದಿದೆ. ಇವೆಲ್ಲವುಗಳಿಗೆ ಕಾರಣ ವನ್ಯಜೀವಿಗಳ ಆವಾಸ ಸ್ಥಾನವಾಗಿರುವ ಅರಣ್ಯ ಪ್ರದೇಶದಲ್ಲಿ ಅವುಗಳಿಗೆ ಅಗತ್ಯವಾದ ಆಹಾರ ದೊರಕದಿರುವುದೇ ಆಗಿದೆಯೆಂದು ಬೇಸರ ವ್ಯಕ್ತಪಡಿಸಿದರು. :: ಅರಣ್ಯ ಅಧಿಕಾರಿಗಳೆ ಹೊಣೆ :: ವನ್ಯಜೀವಿಗಳ ಹಾವಳಿಗೆ ಅರಣ್ಯ ಇಲಾಖಾ ಅಧಿಕಾರಿಗಳೆ ನೇರಹೊಣೆಯೆಂದು ತೀಕ್ಷ್ಣವಾಗಿ ನುಡಿದ ಹರೀಶ್ ಆಚಾರ್ಯ ಅವರು, ವನ್ಯಜೀವಿಗಳ ಆವಾಸ ಸ್ಥಾನವಾದ ಅರಣ್ಯ ಪ್ರದೇಶದಲ್ಲಿ ಅವುಗಳಿಗೆ ಆಹಾರ ಒದಗಿಸುವ ಗಿಡಮರಗಳ ಬದಲಾಗಿ ತೇಗ, ಅಕೇಶಿಯಾ, ನೀಲಗಿರಿ ತೋಪುಗಳನ್ನು ಬೆಳಸಿದ ಉದ್ದೇಶವಾದರು ಏನೆಂದು ಪ್ರಶ್ನಿಸಿ, ಈ ಗಿಡ ಮರಗಳಿಂದ ವನ್ಯ ಜೀವಿಗಳಿಗೆ ಅಗತ್ಯ ಆಹಾರ ದೊರಕುವುದಿಲ್ಲ. ಇಂತಹ ಮರಗಿಡಗಳಿಂದ ಲಾಭ ಪಡೆಯುವವರು ಯಾರೆನ್ನುವುದೇ ಅರ್ಥವಾಗದ ಪರಿಸ್ಥಿತಿ ಇರುವುದಾಗಿ ತಿಳಿಸಿದರು. ಕಾಡು ಹಂದಿಗಳು, ಕೋತಿಗಳ ಹಾವಳಿಯಿಂದ ಸಾಕಷ್ಟು ಕೃಷಿ ಫಸಲುಗಳಿಗೆ ಹಾನಿ ಉಂಟಾಗುತ್ತಿದೆ. ಕಾಡಾನೆ ಹಾವಳಿಯಿಂದ ಕೃಷಿ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ, ರೈತರು ಕೃಷಿ ಚಟುವಟಿಕೆಗಳಿಂದ ವಿಮುಖರಾಗುವ ಸಾಧ್ಯವಿದೆಯೆಂದು ಕಳವಳ ವ್ಯಕ್ತಪಡಿಸಿದರು. :: ಒಂದೇ ಬಗೆಯ ಗಿಡ ಮರಗಳನ್ನು ತೆಗೆಯಿರಿ :: ಅರಣ್ಯ ಪ್ರದೇಶಗಳಲ್ಲಿ ಪ್ರಸ್ತುತ ಕಂಡು ಬರುತ್ತಿರುವ ತೇಗ, ಅಕೇಶಿಯಾ, ನೀಲಗಿರಿ ಮರಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ, ಅದರ ಬದಲಾಗಿ ವನ್ಯ ಜೀವಿಗಳ ಆಹಾರಕ್ಕೆ ಬಳಕೆಯಾಗುವ ಗಿಡಮರಗಳನ್ನು ಬೆಳೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಒಂದೇ ಜಾತಿಯ ಮರಗಳನ್ನು ತೆಗೆದು, ಅದರಿಂದ ಬರುವ ಹಣವನ್ನು ಕಾಡಾನೆ ಬಾರದಂತೆ ಬೇಲಿ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. :: ರಾಜ್ಯಾದ್ಯಂತ ಆಂದೋಲನ :: ಸಂಘಟನೆಯ ವತಿಯಿಂದ ವನ್ಯ ಜೀವಿಗಳ ಬದುಕಿಗೆ ಪೂರಕವಾಗಿ ಅರಣ್ಯ ಪ್ರದೇಶಗಳಲ್ಲಿ ಅಗತ್ಯ ಗಿಡಮರಗಳನ್ನು ಬೆಳೆಯುವಂತೆ ಆಗ್ರಹಿಸಿ ರಾಜ್ಯ ವ್ಯಾಪಿ ಆಂದೋಲನ ನಡೆಸಲಾಗುತ್ತದೆಮದು ಸ್ಪಷ್ಟಪಡಿಸಿದರು. ನಗರದಲ್ಲಿ ಗೋಷ್ಠಿಯಲ್ಲಿ ಸಂಘಟನೆಯ ಸಲಹೆಗಾರರಾದ ವಾಂಚೀರ ವಿಠಲ ನಾಣಯ್ಯ, ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಸೋಮನಾಥ, ಸದಸ್ಯರಾದ ಬಿ.ಬಿ.ವಸಂತ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.