Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
  • *ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*
  • *ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*
  • *ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*
  • *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.3 NEWS DESK : ಇದೇ ಜೂನ್ 21 ರಂದು ನಡೆಯುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ, ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಆಯುಷ್ ಇಲಾಖೆಯಿಂದ ಯೋಗಾಭ್ಯಾಸ ಮಾಡಿಸಬೇಕು ಮತ್ತು ಆಯುಷ್ ಇಲಾಖೆಯಲ್ಲಿ ಲಭ್ಯವಾಗುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ಯೋಗ ಮತ್ತು ಪ್ರವಾಸೋದ್ಯಮದ ಸಹಯೋಗದಿಂದ ಜಿಲ್ಲೆಗೆ ಪ್ರವಾಸಿಗರು ಆಕರ್ಷಿಸುತ್ತಾರೆ. ಆ ಮೂಲಕ ಪ್ರವಾಸೋದ್ಯಮದ ಸೃಷ್ಟಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಆಯುಷ್ ಇಲಾಖೆ ಒತ್ತು ನೀಡಲು ಸಲಹೆ ಮಾಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಅವರು ಮಾತನಾಡಿ, ಆಯುಷ್ ಇಲಾಖಾ ಮಾರ್ಗಸೂಚಿಗಳ ಅನುಸಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಥಳ ನಿಗದಿ ಮಾಡುವುದು, ಯೋಗಭ್ಯಾಸಗಾರರನ್ನು ಸಜ್ಜುಗೊಳಿಸುವುದು, ಯೋಗ ಪ್ರೋಟೋಕಾಲ್‍ನ ಪ್ರಕಾರ ಯೋಗಾಸನಗಳನ್ನು ಪೂರ್ವಭ್ಯಾಸ ಮಾಡಿಸುವುದರ ಕುರಿತು ಮಾಹಿತಿ ನೀಡಿದರು. ಜೂನ್ 16 ರಂದು ಜಾಥ: ಆಯುಷ್ ವೈದ್ಯಾಧಿಕಾರಿ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ) ಡಾ.ಅರುಣ್ ಅವರು ಮಾತನಾಡಿ, `ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್, 16 ರಂದು ಬೆಳಗ್ಗೆ 8.30 ಗಂಟೆಗೆ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಯೋಗ ಶಿಕ್ಷಕರು ಸಾರ್ವಜನಿಕರಿಗೆ, ಹಳ್ಳಿಗಳಲ್ಲಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯೋಗಭ್ಯಾಸ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ 365 ದಿನಗಳ ಗೂಗಲ್ ಲಿಂಕ್ ಮೂಲಕ ಯೋಗಾಭ್ಯಾಸ ಹಮ್ಮಿಕೊಂಡಿದ್ದು, ಈ ಬಗ್ಗೆ ಆಯುಷ್ ಇಲಾಖೆಯಿಂದ, ಯೋಗ ಶಿಕ್ಷಕರಿಂದ ಅರಣ್ಯ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಯುಷ್ ವೈದ್ಯಾಧಿಕಾರಿ ಅವರು ತಿಳಿಸಿದರು. ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ಯೋಗ ತರಬೇತಿದಾರರಿಂದ ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಅರುಣ್ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಬಿಳಿ ಸಮವಸ್ತ್ರದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಕೋರಿದರು. ಎಲ್ಲಾ ಅಧಿಕಾರಿ ಮತ್ತು ಸಾರ್ವಜನಿಕರಿಗೆ ಯೋಗ ಲಿಂಕ್ ಉಪಯೋಗಿಸಿ 14 ದಿನಗಳ “ಯೋಗ ಸವಾಲು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಯುಷ್ ಆರೋಗ್ಯ ಕ್ಷೇಮ ಕೇಂದ್ರಗಳು ಹಾಗೂ ಆಯುಷ್ ಆಸ್ಪತ್ರೆಗಳಲ್ಲಿ ಆಯುಷ್ ಅರಿವು ಹಾಗೂ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕು, ಸಾರ್ವಜನಿಕರ ಓಡಾಟಕ್ಕೆ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳಬೇಕು, ಜಾಥಾವನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳು, ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ವಿದ್ಯಾರ್ಥಿಗಳು ಸೇರಿದಂತೆ ಹಲವು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪೊಲೀಸ್ ಉಪಾಧೀಕ್ಷಕರಾದ ಪಿ.ಎ.ಸೂರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ, ನೀಮಾ ಕೊಡಗು ಅಧ್ಯಕ್ಷರಾದ ಡಾ.ರಾಜರಾಮ್, ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 2026

*ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*

ಜೂನ್ 3, 2026

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 2026

*ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*

ಜೂನ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.3 NEWS DESK  : ಕೊಡಗು ಪ್ರೆಸ್ ಕ್ಲಬ್‍ನ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಜೂ.7 ರಂದು…

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜೂನ್ 3, 2026

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 2026

*ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*

ಜೂನ್ 3, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 3, 2026

*ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಜೂನ್ 3, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*

ಜೂನ್ 3, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*

ಜೂನ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.