
ಮಡಿಕೇರಿ ಜೂ.3 NEWS DESK : ಕೊಡಗು ಪ್ರೆಸ್ ಕ್ಲಬ್‍ನ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಜೂ.7 ರಂದು ಭಾನುವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಕೈಗಾರಿಕಾ ಬಡಾವಣೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಸಮಾಜ ಸೇವಕ ಹಾಗೂ ಉದ್ಯಮಿ, ಲೀಡಿಂಗ್ ಎಡ್ಜ್ ಅಡ್ವಟೈಸಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ಎಡಿಕೇರಿ ಪ್ರಸನ್ನ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣೆಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. :: ಪ್ರಶಸ್ತಿ ಪುರಸ್ಕೃತರು : ಕಾರ್ಯಕ್ರಮದಲ್ಲಿ ಬಾಚರಣೆಯಂಡ ಅನುಕಾರ್ಯಪ್ಪ ಅವರಿಗೆ ಪರಿಣಾಮಕಾರಿ ವರದಿ ಪ್ರಶಸ್ತಿ, ಹಿರಿಕರ ರವಿ ಅವರಿಗೆ ಪರಿಸರ ವರದಿ ಪ್ರಶಸ್ತಿ, ಸಂತೋಷ್ ರೈ ಅವರಿಗೆ ಮಾನವೀಯ ವರದಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. :: ವಾರ್ಷಿಕ ಮಹಾಸಭೆ: ಪ್ರಶಸ್ತಿ ಪ್ರಧಾನ ಸಮಾರಂಭಕ್ಕೂ ಮುಂಚಿತವಾಗಿ ಬೆಳಗ್ಗೆ 10.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ 2015-26ನೇ ಸಾಲಿನ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.








