
ಮಡಿಕೇರಿ ಜೂ.4 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್16-ದೇವನೂರು, ಎಫ್14-ಕಿರಗೂರು ಫೀಡರ್‍ನಲ್ಲಿ ಜೂ.5 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಕಿರಗೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಕೊಟ್ಟಗೇರಿ, ಸುಳುಗೋಡು, ಬಾಳೆಲೆ, ನಿಟ್ಟೂರು, ರಾಜಾಪುರ, ಕಿಸ್ತೂರು, ಮಳಲುಕೋಟೆ, ಕಾರ್ಮಾಡು, ಜಾಗಲೆ, ಮತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








