
ಮಡಿಕೇರಿ ಜೂ.4 NEWS DESK : ಗೋಣಿಕೊಪ್ಪದಲ್ಲಿ ನಿರ್ಮಾಣ ಆಗುತ್ತಿರುವ ನೂತನ ಬಸ್ ನಿಲ್ದಾಣದ ಪೂರ್ಣಗೊಂಡ ಕಾಮಗಾರಿಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಸದ್ಯದಲ್ಲೇ ನೂತನ ಸುಸರ್ಜಿತ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳಾ, ಪಕ್ಷದ ಮುಖಂಡರು ಅಣ್ಣಳ್ಳಮಾಡ ಹರೀಶ್ ಪೂವಯ್ಯ, ಮುನ್ನ, ಪ್ರವೀಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮಲ್ಲಂಡ ಧ್ಯಾನ್ ದೇವಯ್ಯ, ಕುಟ್ಟ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರು ಫಾರ್ದಿನ್, ಸಾಜಿ, ಪಿ ಡಿ ಓ ತಿಮ್ಮಯ್ಯ, ವಿಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









