Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*
  • *ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*
  • *ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 
  • *ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*
  • *ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
  • *”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
  • *ಕಾಡಾನೆ ದಾಳಿಗೆ ಮಹಿಳೆ ಬಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.5  NEWS DESK : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ನಾಗಲ್ಯಾಂಡ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದರು. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಣ್ಣಳಮಾಡ ಸಂಧ್ಯಾ ಅವರು ತಮ್ಮ ಇಬ್ಬರು ಪುತ್ರಿಯರ ಜೊತೆಯಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ವಾಸವಾಗಿದ್ದು, ಪತಿ ಸುನೀಲ್ ಅಚ್ಚಯ್ಯ ಅವರು ಐಜಿಪಿ ಹುದ್ದೆಯೊಂದಿಗೆ ದೆಹಲಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಕೋಣನಕಟ್ಟೆ ತೋಟದ ಕಡೆಗೆ ತೆರಳಿದ ಸಂದರ್ಭ ಕಾಡಾನೆ ಎದುರಾಗಿದೆ. ಕಾರ್ಮಿಕರು ಸ್ಥಳದಿಂದ ಓಡಿ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಸಂಧ್ಯಾ ಅವರ ಮೇಲೆ ದಾಳಿ ಮಾಡಿದ ಕಾಡಾನೆ ಗಂಭೀರವಾಗಿ ಗಾಯಗೊಳಿಸಿದೆ. ಸಂಧ್ಯಾ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಮೃತ ಸಂಧ್ಯಾ ಅವರು ಪತಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ, ಪುತ್ರಿಯರಾದ ವಿದುಷ ಹಾಗೂ ಅನನ್ಯ ಅವರನ್ನು ಅಗಲಿದ್ದಾರೆ. *ಪ್ರತಿಭಟನೆ* ವಿಷಯ ತಿಳಿದ ಗ್ರಾಮಸ್ಥರು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಜಮಾಯಿಸಿ ಅರಣ್ಯ ಇಲಾಖೆ ವಿರುದ್ದ ತೀವ್ರ ಆಕ್ರೋಷ ವ್ಯಕ್ತಪಡಿಸಿದರು. ಕಾಡಾನೆಗಳು ತೋಟಗಳಲ್ಲಿ ಬೀಡು ಬಿಟ್ಟಿವೆ. ಅರಣ್ಯ ಇಲಾಖೆ ಕಾಡಾನೆಗಳನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಮಾನವ ಜೀವ ಹಾನಿಯಾದ ಸಂದರ್ಭ ಪರಿಹಾರದ ಚೆಕ್ ವಿತರಿಸಲು ಮಾತ್ರವೇ ಅರಣ್ಯ ಇಲಾಖೆ ಮುಂದಾಗುತ್ತಿದೆ ಎಂದು ಆಕ್ರೋಷ ಹೊರಗೆಡವಿದರು. ತಕ್ಷಣವೇ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕು. ಕಾಡಂಚಿನ ಪ್ರದೇಶಗಳಲ್ಲಿ ಸೋಲಾರ್ ಬೇಲಿ, ರೈಲ್ವೇ ಬ್ಯಾರಿಕೇಡ್, ಆನೆ ಕಂದಕಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮಾನವ ಜೀವ ಹಾನಿ ಮಾಡುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು. *ಶಾಸಕರ ಭೇಟಿ* ವಿಷಯ ತಿಳಿದ ತಕ್ಷಣವೇ ಲೋಪಮುದ್ರ ಆಸ್ಪತ್ರೆಗೆ ಭೇಟಿ ನೀಡಿದ ವಿರಾಜಪೇಟೆ ಕ್ಷೇತ್ರ ಶಾಸಕ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಾಡಾನೆ ದಾಳಿ ನಡೆಸಿದ ಸಂದರ್ಭ ತಪ್ಪಿಸಿಕೊಳ್ಳುವ ವೇಳೆ ಬಿದ್ದು ಗಾಯಗೊಂಡ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಉನ್ನತ ಚಿಕಿತ್ಸೆ ನೀಡುವಂತೆಯೂ ಶಾಸಕರು ಸೂಚಿಸಿದರಲ್ಲದೇ, ವೈದ್ಯರಿಂದ ಗಾಯಾಳುಗಳ ಆರೋಗ್ಯದ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಮಾನವ ಜೀವ ಹಾನಿ ಎಸಗಿದ ಕಾಡಾನೆಯ ಸೆರೆಗೂ ಶಾಸಕರು ಸೂಚನೆ ನೀಡಿದರು. ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ತಕ್ಷಣವೇ ಕಾಡಿಗೆ ಅಟ್ಟುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಪೊನ್ನಣ್ಣ ಸೂಚಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*

ಜೂನ್ 5, 2026

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಜೂ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್…

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*

ಜೂನ್ 5, 2026

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.