Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿ : ಹಿರಿಯ ಸಿವಿಲ್ ನ್ಯಾಯಧೀಶೆ ಶುಭ*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*
  • *ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*
  • *ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 
  • *ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*
  • *ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
  • *”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.5 NEWS DESK : ಕೆದಮುಳ್ಳೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ 43 ಮನೆಗಳ ಬೀಗದ ಕೀ ಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಆದಿವಾಸಿ ಯರವ ಮತ್ತಿತರ ಕುಟುಂಬಗಳಿಗೆ ನೀಡುವ ಮೂಲಕ ಹಸ್ತಾಂತರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯ ಸರ್ವೆ ನಂ.370/1 ರ 7.50 ಎಕರೆ ಜಾಗದ ಬಡಾವಣೆಯಲ್ಲಿ ನಿರ್ಮಿಸಿರುವ ಮನೆಗಳು ಹಾಗೂ ಮೂಲ ಸೌಕರ್ಯ ಕಾಮಗಾರಿ ಉದ್ಘಾಟಿಸಿ, ಶಾಸಕರು ಮಾತನಾಡಿದರು.
ಪರಿಶಿಷ್ಟ ಪಂಗಡದ ಆದಿವಾಸಿ ಯರವ, ಜೇನುಕುರುಬ, ಬೆಟ್ಟಕುರುಬ ಸಮಾಜಗಳ ಮನೆ ನಿರ್ಮಾಣದ ಕಾಮಗಾರಿ ಯೋಜನೆ ಪೂರ್ಣಗೊಳಿಸುವಲ್ಲಿ ಹಲವು ಪ್ರಯತ್ನ ನಡೆದಿದೆ ಎಂದು ಹೇಳಿದರು. ಯೋಜನೆ ಅರ್ಧಕ್ಕೆ ಸ್ಥಗಿತಗೊಂಡಿತ್ತು, ಆ ನಿಟ್ಟಿನಲ್ಲಿ ಬೆಂಗಳೂರಿನ ನೀರು ಸರಬರಾಜು ವಿಭಾಗದಿಂದ ಸಿಎಸ್‍ಆರ್ ನಿಧಿಯಡಿ 1.60 ಲಕ್ಷ ರೂ. ಹೆಚ್ಚುವರಿ ಹಣ ಬಿಡುಗಡೆ ಮಾಡಿಸಿ ಮನೆ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಈ ಹಿಂದೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಅಂದಾಜು ಮಾಡಿದ್ದರು. ಆ ಸಂದರ್ಭದಲ್ಲಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಅರ್ಧಕ್ಕೆ ಕಾಮಗಾರಿ ಸ್ಥಗಿತಗೊಳಿಸಿದ್ದರು. ಆ ದಿಸೆಯಲ್ಲಿ ಸಿಎಸ್‍ಆರ್ ನಿಧಿಯಡಿ ಒಂದು ಕೋಟಿಯಷ್ಟು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿಸಲಾಯಿತು ಎಂದು ಪೊನ್ನಣ್ಣ ಅವರು ಸ್ಮರಿಸಿದರು. ಈ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಲಭ್ಯ ಒಳಗೊಂಡಿದೆ. ಒಳಚರಂಡಿ, ವಿದ್ಯುತ್ ದೀಪ, ಕುಡಿಯುವ ನೀರು ಪೂರೈಕೆ, ಸೇರಿದಂತೆ ಉತ್ತಮ ಬಡಾವಣೆ ನಿರ್ಮಾಣ ಆಗಿದೆ. ವಸತಿ ರಹಿತರು ಹೋರಾಟ ಮಾಡಿ ಮನೆ ಸಿಗುವಂತಾಗಿದೆ. ಆ ನಿಟ್ಟಿನಲ್ಲಿ ಸರಿಯಾಗಿ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕರು ಸಲಹೆ ಮಾಡಿದರು.  ಮುಖ್ಯಮಂತ್ರಿ ಅವರನ್ನು ವಿರಾಜಪೇಟೆಗೆ ಆಹ್ವಾನಿಸಿ ನೂತನ ಮನೆಯ ಕೀ ಹಸ್ತಾಂತರಿಸಬೇಕು ಎಂಬ ಉದ್ದೇಶವಿತ್ತು. ಆದರೆ ಈ ಕಾರ್ಯ ಆಗದಿರುವುದರಿಂದ ಸದ್ಯ ಮಳೆಗಾಲ ಆರಂಭವಾಗಿದ್ದು, ತಮಗೆ ಅನಾನುಕೂಲ ಆಗಬಾರದು ಎಂಬ ಉದ್ದೇಶದಿಂದ ಪೂರ್ಣಗೊಂಡಿರುವ 43 ಮನೆಗಳ ಬೀಗದ ಕೀಯನ್ನು ಹಸ್ತಾಂತರಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಇಲ್ಲಿನ ಪರಿಶಿಷ್ಟ ಎಲ್ಲಾ ಜನರಿಗೆ ನಿವೇಶನ ಹಾಗೂ ವಸತಿ ಕಲ್ಪಿಸಬೇಕು ಎಂಬ ಆಶಯವಾಗಿದೆ. ಆ ನಿಟ್ಟಿನಲ್ಲಿ ಉಳಿದ 17 ಮನೆಗಳನ್ನು ಸಹ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಶಾಸಕರು ತಾಕೀತು ಮಾಡಿದರು. ಈಗಾಗಲೇ ನಿರ್ಮಿಸಿರುವ ಸುಸಜ್ಜಿತ ಬಡಾವಣೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪಂಚಾಯತ್ ಅವರು ಸಹ ಬಡಾವಣೆ ನಿರ್ವಹಣೆಗೆ ಮುಂದಾಗಬೇಕು ಎಂದರು. ಮನೆ ಇಲ್ಲದ ಅನೇಕ ಕುಟುಂಬಗಳಿಗೆ ವಸತಿ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಹಂತ ಹಂತವಾಗಿ ನಿವೇಶನ ಹಾಗೂ ಮನೆ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಭರವಸೆ ನೀಡಿದರು.
ಈ ಬಡಾವಣೆಯಲ್ಲಿ ಇರುವವರು ಹೊಸ ಮನೆಗೆ ಸ್ಥಳಾಂತರವಾಗ ಬೇಕು. ಗುಡಿಸಲನ್ನು ತೆರವುಗೊಳಿಸಿದಲ್ಲಿ ಇನ್ನಷ್ಟು ಮನೆಗಳ ನಿರ್ಮಾಣ ಮಾಡಲಾಗುವುದು ಎಂದರು. ‘ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮುಂದಾಗಬೇಕು. ಶಿಸ್ತು ಬದ್ಧ ಜೀವನ ನಡೆಸಬೇಕು. ತಮ್ಮ ಸೇವಕನಾಗಿ ಸದಾ ಕರ್ತವ್ಯ ನಿರ್ವಹಿಸಲು ಬದ್ದನಾಗಿದ್ದೇನೆ ಎಂದು ಎ.ಎಸ್.ಪೊನ್ನಣ್ಣ ಅವರು ಇದೇ ಸಂದರ್ಭದಲ್ಲಿ ನುಡಿದರು.’
ಸಮಗ್ರ ಗಿರಿಜನ ಯೋಜನಾ ನಿರ್ದೇಶಕರಾದ ಎಸ್.ಹೊನ್ನೇಗೌಡ ಅವರು ಮಾತನಾಡಿ ದಿಡ್ಡಳ್ಳಿ ಆದಿವಾಸಿ ಹೋರಾಟಗಾರರ ಪ್ರಯತ್ನದಿಂದ 2016-17 ರಲ್ಲಿ 7.50 ಎಕರೆ ಭೂಮಿಯನ್ನು ಕೆದಮುಳ್ಳೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಾಯ್ದಿರಿಸಲಾಗಿತ್ತು. ದಿಡ್ಡಳ್ಳಿ ಹೋರಾಟಗಾರರಿಗೆ ಬಸವನಹಳ್ಳಿಯಲ್ಲಿ ಮನೆ ನಿರ್ಮಿಸಿದ್ದರಿಂದ ಇಲ್ಲಿನ ಸುತ್ತಮುತ್ತಲಿನ ಯರವ ಬೆಟ್ಟಕುರುಬ, ಜೇನುಕುರುಬ ಆದಿವಾಸಿಗಳಿಗೆ 43 ಮನೆಗಳನ್ನು ನಿರ್ಮಿಸಲಾಗಿದೆ ಎಂದರು.
ಆರಂಭದಲ್ಲಿ 15 ಕೋಟಿ ರೂ. ವೆಚ್ಚ ಅಂದಾಜು ಪಟ್ಟಿ ತಯಾರಿಸಲಾಗಿತ್ತು. 2019-20 ರಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಒಂದು ಮನೆಗೆ 5 ಲಕ್ಷ ರೂ.ನಂತೆ ನಿಗಧಿಯಾಗಿತ್ತು. ಆದರೆ ಎಸ್.ಆರ್.ದರ ಹೆಚ್ಚಾದ ಪರಿಣಾಮ ಮನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿತ್ತು. ಆ ನಿಟ್ಟಿನಲ್ಲಿ ಸಿಎಸ್‍ಆರ್ ನಿಧಿಯಿಂದ ತಲಾ 1.60 ಲಕ್ಷ ರೂವನ್ನು ಶಾಸಕರ ಪ್ರಯತ್ನದಿಂದ ಬಿಡುಗಡೆಯಾಗಿತ್ತು. ಈ ಬಡಾವಣೆಯಲಿ 129 ಮನೆ ನಿರ್ಮಿಸಬಹುದಾಗಿದ್ದು, ಸದ್ಯ 60 ಮನೆಗಳಲ್ಲಿ 43 ಮನೆಗಳು ಪೂರ್ಣಗೊಂಡಿದ್ದು ಉಳಿದ 17 ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದರು. ಪರಿಶಿಷ್ಟ ಪಂಗಡದ 500 ಕುಟುಂಬಗಳಿಗೆ ಮನೆ ಹಕ್ಕು ಪತ್ರ ವಿತರಿಸಲು ಸಿದ್ದವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಒಳಚರಂಡಿ ಒಳಗೊಂಡಿರುವ ಬಡಾವಣೆಯು ವಿದ್ಯುತ್ ಮಾರ್ಗ, ನಲ್ಲಿ ಪೈಪುನ ವ್ಯವಸ್ಥೆ, ಕುಡಿಯುವ ನೀರು, ಬಾರಿಕಾಡು ಉದ್ಯಾನವನ ಸೇರಿದಂತೆ ಉತ್ತಮ ಬಡಾವಣೆಯನ್ನು ಹೊಂದಿದೆ ಎಂದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಸದಸ್ಯರಾದ ಪಿ.ವಿ.ಜಾನ್ಸನ್, ಪಂಕಜ, ಕೆಡಿಪಿ ಸದಸ್ಯರಾದ ಪ್ರಶಾಂತ್ ಉತ್ತಪ್ಪ, ಪ್ರಮುಖರಾದ ದೇಚಮ್ಮ ಕಾಳಪ್ಪ, ಜೇಫ್ರಿ ಉತ್ತಪ್ಪ, ರಂಜಿ ಪೂಣಚ್ಚ, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒಗಳಾದ ರಾಜೇಶ್, ಶೇಖರ್, ತಾಲ್ಲೂಕು ಐಟಿಡಿಪಿ ಅಧಿಕಾರಿ ತೇಜರಾಜ್, ಎಂಜಿನಿಯರ್‍ಗಳಾದ ಸಚಿನ್, ರಘುನಂದನ್, ಇತರರು ಇದ್ದರು. ಪರಿಸರ ದಿನಾಚರಣೆ ಪ್ರಯುಕ್ತ ಇಲ್ಲಿನ ಬಡಾವಣೆಯ ಬಾರಿಕಾಡು ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವು ಅರ್ಥಪೂರ್ಣವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿ : ಹಿರಿಯ ಸಿವಿಲ್ ನ್ಯಾಯಧೀಶೆ ಶುಭ*

ಜೂನ್ 5, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*

ಜೂನ್ 5, 2026

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.5 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ…

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*

ಜೂನ್ 5, 2026

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.