
ಮಡಿಕೇರಿ ಜೂ.5 NEWS DESK : ಶ್ರೀಮಂಗಲ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2-ಕುಟ್ಟ, ಫೀಡರ್‍ನಲ್ಲಿ ಜೂನ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕುಟ್ಟ, ನಾತಂಗಾಲ, ಸಿಂಕೋನ, ನಲ್ಲೂರು, ಮಂಚಳ್ಳಿ, ಕಾಯಿಮನೆ, ಕೆ.ಎಂ.ಕೊಲ್ಲಿ, ನಾಣಾಚಿ, ನಾಗರಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








