Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ

ಜೂನ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ಜೂ.9 NEWS DESK : ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರ ಕಾರ್ಯಕರ್ತರ ಕುಂದುಕೊರತೆ ಸಭೆ ನಗರ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಭಾಗವಹಿಸಿ, ಮೊದಲಿಗೆ ಕಾರ್ಯಕರ್ತರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಕರೆ ನೀಡಿದರು. ಎಸ್‍ಐಆರ್ ಕುರಿತು ಹೆಚ್ಚು ಗಮನ ಹರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ಇದಲ್ಲದೆ, ತಮ್ಮ ತಮ್ಮ ಪ್ರದೇಶಗಳಲ್ಲಿ ಸಮಸ್ಯೆಗೀಡಾದವರು ಹಾಗೂ ಅನಾರೋಗ್ಯಕ್ಕೆ ತುತ್ತಾದವರ ಬಗ್ಗೆ ಕಾಳಜಿ ವಹಿಸಿ ಸಾಧ್ಯವಾದಷ್ಟು ಸಹಾಯ ಮಾಡಬೇಕು. ಇಂತಹ ವಿಷಯಗಳನ್ನು ನನ್ನ ಗಮನಕ್ಕೂ ತರಬೇಕೆಂದು ತಿಳಿಸಿದರು. ಸ್ಥಳೀಯ ಬೂತ್ ಮಟ್ಟದಿಂದ ತಾಲೂಕು ಮಟ್ಟದವರೆಗೆ ಸಕ್ರಿಯ ಕಾರ್ಯಕರ್ತರನ್ನು ಗುರುತಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು. ನಗರದ ಸ್ವಚ್ಛತೆ ವಿಚಾರದಲ್ಲಿಯೂ ಎಲ್ಲರೂ ಹೆಚ್ಚಿನ ಗಮನ ಹರಿಸಬೇಕೆಂದು ಅವರು ಸಲಹೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಿ ಶಾಸಕರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯೋಜನಾ ಪ್ರಾಧಿಕಾರ ತಾಲೂಕು ಅಧ್ಯಕ್ಷ ಕೆ.ಎ.ಆದಮ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಸಿ.ನಾಗೇಶ್, ನಗರ ಕಾರ್ಯದರ್ಶಿ ಭುವನೇಶ್, ಮಹಿಳಾ ಘಟಕ ಅಧ್ಯಕ್ಷೆ ಶುಭ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಬಿ.ಸಿ. ವೆಂಕಟೇಶ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಜಿಲ್ಲೆಯ ವಕೀಲರಾದ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು…

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ

ನವೆಂಬರ್ 3, 2026

2027ರ ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ; ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟದ ಧ್ವಜ ಹಸ್ತಾಂತರ: ಎರಡು ಕುಟುಂಬಗಳಿಗೆ ಆತಿಥ್ಯದ ಜವಾಬ್ದಾರಿ

ನವೆಂಬರ್ 3, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.