
ಸುಂಟಿಕೊಪ್ಪ ಜೂ.11 NEWS DESK : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು, ಮಲೇರಿಯಾ ಕಾಯಿಲೆ ಹರಡುವ ಬಗ್ಗೆ ಅದರ ರೋಗ ಲಕ್ಷಣಗಳ ಬಗ್ಗೆ ಮತ್ತು ನೀಡುವ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗೃತ ಕ್ರಮವಹಿಸುವ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಆರೋಗ್ಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇರಾಜ್ ರೋಗ ಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ಸು.ಪ್ರಾ.ಆ.ಕೇಂದ್ರದ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.









