
ಮಡಿಕೇರಿ ಜೂ.15 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರ ಹಾಜರಾತಿ, ಶಾಲಾ ಮಕ್ಕಳ ಹಾಜರಾತಿ, ಬಿಸಿಯೂಟ, ಅಡುಗೆ ಕೋಣೆ, ಗಣಕಯಂತ್ರ ಕೊಠಡಿ ವೀಕ್ಷಣೆ, ಗ್ರಂಥಾಲಯ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಇಲ್ಲಿನ ವ್ಯವಸ್ಥೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಗದಾಳು ಶಾಲೆಯು ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಶಾಲಾ ದಾಖಲಾತಿ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಹೇಳಿದರು. ಸುತ್ತಮುತ್ತಲಿನ ಎಲ್ಲಾ ಮಕ್ಕಳು ಶಾಲೆಗೆ ಸೇರಿ ಶಿಕ್ಷಣ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಶಾಲಾ ದಾಖಲಾತಿ ಹೆಚ್ಚಳಕ್ಕೆ ಶ್ರಮಿಸುವಂತೆ ಮುಖ್ಯಶಿಕ್ಷಕರು ಹಾಗು ಸಹಶಿಕ್ಷಕರಿಗೆ ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಎಸ್‍ಎಸ್‍ಎಲ್‍ಸಿ ಯಲ್ಲಿ ಕಡಗದಾಳು ಶಾಲೆ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗುಣಾತ್ಮಕ ಕಲಿಕೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು. ಕಡಗದಾಳು ಶಾಲೆಯ ಮುಖ್ಯೋಪಾಧ್ಯಾಯರಾದ ಡೈಸಿ, ಸಹ ಶಿಕ್ಷಕರು ಇತರರು ಇದ್ದರು.









