Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.16 NEWS DESK : ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ ಬೂತ್‍ಮಟ್ಟದ ಏಜೆಂಟರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಆರ್.ಶ್ರೀಧರ್ ಅವರು ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮತಗಟ್ಟೆ ಏಜೆಂಟರುಗಳಿಗೆ ಎಸ್‍ಐಆರ್ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಏಜೆಂಟರು ಎಸ್‍ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಹಕರಿಸಬೇಕು, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು. ಕೈಬಿಟ್ಟ ಹೆಸರುಗಳನ್ನು ಮತ್ತೆ ಸೇರಿಸಲು ನಮೂನೆ ಭರ್ತಿ ಮಾಡಲು ಸಹಾಯ ಮಾಡಬೇಕು, ಮತಗಟ್ಟೆ ಹಂತದಲ್ಲಿನ ದೋಷಗಳನ್ನು ಗುರುತಿಸಿ, ಚುನಾವಣಾ ಅಧಿಕಾರಿಗಳಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಬೇಕು ಎಂದು ಆರ್.ಶ್ರೀಧರ್ ಅವರು ತಿಳಿಸಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮತದಾರರ ಮಾಹಿತಿ ನವೀಕರಣ, ಹೊಸ ಮತದಾರರ ನೋಂದಣಿ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳ ತಿದ್ದುಪಡಿ ಮತ್ತಿತರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ವಿವರವಾದ ತರಬೇತಿ ನೀಡಲಾಯಿತು. ತರಬೇತುದಾರರಾದ ಎಸ್.ಡಿ.ಪ್ರಶಾಂತ್ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಭಾರತೀಯ ಚುನಾವಣಾ ಆಯೋಗದ ವತಿಯಿಂದ ನಡೆಯುವ ಮಹತ್ವದ ಕಾರ್ಯವಾಗಿದೆ. ಮತಗಟ್ಟೆ ಮಟ್ಟದ ಏಜೆಂಟರುಗಳು ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು, ತಪ್ಪುಗಳನ್ನು ತಿದ್ದಲು ಮತ್ತು ಅರ್ಹರಲ್ಲದ ಮತದಾರರನ್ನು ತೆಗೆದುಹಾಕುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು. ಮತದಾರರಾಗಲು ಭಾರತದ ಪ್ರಜೆಯಾಗಿರಬೇಕು, ಅರ್ಹತಾ ದಿನಾಂಕಗಳಲ್ಲಿ 18 ವರ್ಷಕ್ಕಿಂತ ಕಡಿಮೆಯಾಗಿರಬಾರದು, ಆ ಮತಗಟ್ಟೆಯ ಸಾಮಾನ್ಯ ನಿವಾಸಿಯಾಗಿರಬೇಕು ಎಂದರು. ಅಧಿಕಾರಿಗಳು ನಿರ್ದಿಷ್ಟ ಅವಧಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಪರಿಶೀಲಿಸಬೇಕು, 18 ವರ್ಷ ತುಂಬಿದ ಯುವಕ-ಯುವತಿಯರು ಮತ್ತು ಹೊಸದಾಗಿ ಸ್ಥಳಾಂತರಗೊಂಡ ಅರ್ಹ ನಾಗರಿಕರಿಂದ ಫಾರ್ಮ್-6 ಅನ್ನು ಭರ್ತಿ ಮಾಡಿಸಿ ನೋಂದಾಯಿಸಿಕೊಳ್ಳಬೇಕು, ಮೃತಪಟ್ಟವರು, ಬೇರೆಡೆ ಸ್ಥಳಾಂತರಗೊಂಡವರು ಅಥವಾ ನಕಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್-7 ಅನ್ನು ಸ್ವೀಕರಿಸಬೇಕು, ಹೆಸರು, ವಿಳಾಸ, ವಯಸ್ಸು ಅಥವಾ ಭಾವಚಿತ್ರ ತಪ್ಪಾಗಿದ್ದರೆ ಅವುಗಳನ್ನು ಸರಿಪಡಿಸಲು ಹಾಗೂ ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾವಣೆಗೆ ಫಾರ್ಮ್-8 ಅನ್ನು ಸಂಗ್ರಹಿಸಬೇಕು ಎಂದು ಹೇಳಿದರು. ಗಣತಿ ಪ್ರಕ್ರಿಯೆಯಲ್ಲಿ ಅಗತ್ಯವಿರುವ ರಿಜಿಸ್ಟರ್‍ಗಳು ಮತ್ತು ಇತರ ಯಾವುದೇ ಅಗತ್ಯ ಲೇಖನ ಸಾಮಾಗ್ರಿಗಳನ್ನು ಹೊಂದಿರುವ ವಿಶೇಷ ತೀವ್ರ ಪರಿಷ್ಕರಣೆ ಎಂದು ಲೇಬಲ್ ಮಾಡಲಾದ ಕಿಟ್ ಬ್ಯಾಗ್, ಯಾವುದೇ ಸೂಚಿಸಿದ ದಿನಾಂಕದದಂದು ಅಸ್ತಿತ್ವದಲ್ಲಿರುವ ಪ್ರತಿಯೊಬ್ಬ ಮತದಾರರಿಗೆ ಅಸ್ತಿತ್ವದಲ್ಲಿರುವ ಮತದಾರರ ಪೂರ್ವ ಮುದ್ರಿತ ವಿವರಗಳೊಂದಿಗೆ ಎಣಿಕೆ ನಮೂನೆಗಳ ಜೆರಾಕ್ಸ್ ಪ್ರತಿಗಳು, ಎಣಿಕೆಯ ಸಮಯದಲ್ಲಿ ಯಾವುದೇ ಮನೆಗೆ ಬೀಗ ಹಾಕಲಾಗಿದೆ ಅಥವಾ ಮುಚ್ಚಲಾಗಿದೆ ಎಂದು ಬಿಎಲ್‍ಒ ಕಂಡುಕೊಂಡರೆ, ಅವನು/ಅವಳು ಎಣಿಕೆ ನಮೂನೆಗಳನ್ನು ಮನೆಯಲ್ಲಿ ಅಳವಡಿಸಬೇಕು ಮತ್ತು ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲು ಕನಿಷ್ಟ ಮೂರು ಸಲ ಮನೆಗೆ ಭೇಟಿ ನೀಡಬೇಕು ಎಂದರು.
ಮೊದಲೇ ಭರ್ತಿ ಮಾಡಿದ ಎಣಿಕೆ ನಮೂನೆಯನ್ನು ಡೌನ್ಲೋಡ್ ಮಾಡಬಹುದು ಮತ್ತು ಭರ್ತಿ ಮಾಡಿದ ನಮೂನೆಗಳು ಮತ್ತು ದಾಖಲೆಗಳನ್ನು ಆನ್‍ಲೈನ್ ಮೋಡ್ ಮೂಲಕ ಅಪ್ಲೋಡ್ ಮಾಡಬಹುದು ಎಂದು ಬಿಎಲ್‍ಒ ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು. ಬಿಎಲ್‍ಒಗಳು ಅಗತ್ಯ ದಾಖಲೆಗಳೊಂದಿಗೆ ಎಣಿಕೆ ನಮೂನೆಯ ಒಂದು ಪ್ರತಿಯನ್ನು ತನ್ನೊಂದಿಗೆ ಇಟ್ಟುಕೊಳ್ಳಬೇಕು ಮತ್ತು ಅರ್ಜಿದಾರರು ಇಟ್ಟುಕೊಳ್ಳಬೇಕಾದ ಎಣಿಕೆ ನಮೂನೆಯ ಇನ್ನೊಂದು ಪ್ರತಿಯ ಮೇಲೆ ನಮೂನೆ ಮತ್ತು ದಾಖಲೆಯ ಸ್ವೀಕೃತಿಯನ್ನು ನೀಡಬೇಕು ಎಂದು ವಿವರಿಸಿದರು. ಕಾರ್ಯಾಗಾರದಲ್ಲಿ ಚುನಾವಣಾ ಶಿರಸ್ತೆದಾರರು ಹಾಗೂ ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು ಮತ್ತು ಏಜೆಂಟರುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.