Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*
  • *ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*
  • *ವಿಶೇಷ ಚೇತನರಿಂದ ಅರ್ಜಿ ಆಹ್ವಾನ*
  • *ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಪಟ್ಟಣಕ್ಕೆ ಬಂದ ಕಾಡು ಕುರಿ*
  • *ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*
  • *ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*
  • *ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 
  • *’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*
  • *ಕೊಡವರಿಗೆ ವಿಶೇಷ ಸ್ಥಾನಮಾನ : ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.23 ರಂದು ಕುಶಾಲನಗರದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.23 ರಂದು ಕುಶಾಲನಗರದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ*

ಜೂನ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.17 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಮೊದಲ ಬಾರಿಗೆ ಜೂ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಅವರು ಶರಣರ ಚಿಂತನೆಗಳ ಬೆಳಕಿನಿಂದ ಸಮಾನತೆಯ ಸಮಾಜ ಕಟ್ಟುವ ಸಂದೇಶಗಳೊoದಿಗೆ 12ನೇ ಶತಮಾನದ ವಚನಕಾರರ ಸಂದೇಶಗಳನ್ನು ಸಮಾಜದಲ್ಲಿ ಬಿತ್ತುವ ಮಹತ್ತರವಾದ ಕಾಯಕ ಕಳೆದ 40 ವರ್ಷಗಳಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯುತ್ತಾ ಬಂದಿದೆ. ಸುತ್ತೂರು ಮಠದ 24ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರು ಗೌರವ ಅಧ್ಯಕ್ಷರಾಗಿದ್ದಾರೆ. ಇವರ ಸಾನಿಧ್ಯದಲ್ಲಿ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಾಧ್ಯಕ್ಷರಾಗಿರುವ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರಗೌಡ ಸೇರಿದಂತೆ ನಾಡಿನ ಅನೇಕ ಶರಣ ಸಾಹಿತ್ಯದ ಚಿಂತಕರು, ಸಮಾಜ ಸುಧಾರಕರು ನಾಡಿನ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಯಿoದ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಿoದ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ಸಾಗಲಿದೆ. ವಿವಿಧ ಕಲಾತಂಡಗಳು, ಪೂರ್ಣ ಕುಂಭ ಹೊತ್ತ ಮಹಿಳೆಯರು, ಶರಣರ ವೇಷ ಧರಿಸಿದ ಶಾಲಾ ಕಾಲೇಜು ವಿದ್ಯಾರ್ಥಿ ಗಳು, ಮಾಜಿ ಯೋಧರು ಸೇರಿದಂತೆ ವಿವಿಧ ಸಮುದಾಯಗಳ ಮಂದಿ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಗಾಯತ್ರಿ ಕಲ್ಯಾಣ ಮಂಟಪದಿoದ ಹೊರಡುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕೊಡಗು ಅಪರ ಜಿಲ್ಲಾಧಿಕಾರಿ ಡಾ.ಸಹನಾ ಹಾದಿಮನಿ ಹಾಗೂ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಮೆರವಣಿಗೆ ರಥಬೀದಿಗಾಗಿ ಗಣಪತಿ ದೇವಾಲಯ ವೃತ್ತಕ್ಕೆ ಬಂದು ಮುಖ್ಯ ರಸ್ತೆಗಾಗಿ ರೈತ ಸಹಕಾರ ಭವನವನ್ನು ತಲುಪಲಿದೆ. ಮೆರವಣಿಗೆಗೂ ಮೊದಲು ಬೆಳಗ್ಗೆ 8.30 ಗಂಟೆಗೆ ರೈತ ಸಹಕಾರ ಭವನದ ಬಳಿ ರಾಷ್ಟ್ರಧ್ವಜ, ನಾಡ ಧ್ವಜ ಹಾಗೂ ಶರಣ ಸಾಹಿತ್ಯ ಪರಿಷತ್ತು ಧ್ವಜಗಳ ಆರೋಹಣ ನಡೆಯಲಿದೆ. 10.30 ಗಂಟೆಗೆ ದೊಡ್ಡವೀರರಾಜೇಂದ್ರ ವೇದಿಕೆಯಲ್ಲಿ ನಡೆಯುವ ಸಮಾರಂಭವನ್ನು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಅನುಭಾವದ ನುಡಿಯಾಡಲಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಮಂತರಗೌಡ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಸಂಸದ ಯದುವೀರ್ ವಚನಗಳ ಹೊತ್ತಿಗೆ ಬಿಡುಗಡೆ ಮಾಡುವರು. ಸಮ್ಮೇಳನದ ಅನುಭವ ಮಂಟಪದಲ್ಲಿ ವಚನ ಸಾಹಿತ್ಯದ ವಿವಿಧ ವಿಚಾರ ಗೋಷ್ಠಿಗಳು, ವಚನ ಗಾಯನಗಳು ಗಮನ ಸೆಳೆಯಲಿವೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಂತರ ಸಂಜೆ 6 ಗಂಟೆಯಿoದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬoಧ ಈಗಾಗಲೇ ಹಲವು ಸಮಿತಿಗಳನ್ನು ರಚಿಸಲಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆಗಳ ಶರಣ ಚಿಂತಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು ಎಲ್ಲರಿಗೂ ಶರಣ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಮೂರ್ತಿ ಮಾಹಿತಿ ನೀಡಿದರು. ರಾಜ್ಯ ಮತ್ತು ದೇಶ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಗಳನ್ನು ತೆರೆಯುವ ಮೂಲಕ ಮಹತ್ತರವಾದ ಸೇವೆಗೈಯುತ್ತಿರುವ ಸುತ್ತೂರು ಮಠದ 23 ನೇ ಜಗದ್ಗುರುಗಳಾದ ಡಾ.ರಾಜೇಂದ್ರ ಸ್ವಾಮೀಜಿ ಯವರು ಶರಣ ಸಾಹಿತ್ಯ ಪರಿಷತ್ತನ್ನು 1986 ರಲ್ಲಿ ಕಟ್ಟಿದರು. ಈ ಪರಿಷತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲದೇ ನೆರೆಯ ಮಹಾರಾಷ್ಟ್ರ, ಗೋವಾ, ಆಂಧ್ರ ಹಾಗೂ ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೊಡಗು ಜಿಲ್ಲೆಯಲ್ಲೂ ಕೂಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಗಳ ಎಳೆಯ ಮಕ್ಕಳಲ್ಲಿ ಶರಣರ ಚಿಂತನೆಗಳನ್ನು ಬಿತ್ತುವ ಕೆಲಸ ವಾಗುತ್ತಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ.ಶಿವಪ್ಪ, ಹಣಕಾಸು ಸಮಿತಿ ಅಧ್ಯಕ್ಷ ಶಾಂಬಶಿವಯ್ಯ, ಯುವ ಘಟಕದ ಅಧ್ಯಕ್ಷ ಮೋಹನ್ ಹಕ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಹಾಗೂ ಮಹಿಳಾ ಘಟಕ ಕದಳಿ ವೇದಿಕೆಯ ಮಡಿಕೇರಿ ತಾಲ್ಲೂಕು ಪದಾಧಿಕಾರಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026

*ವಿಶೇಷ ಚೇತನರಿಂದ ಅರ್ಜಿ ಆಹ್ವಾನ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.18 NEWS DESK : ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ (ಎನ್‍ಎಂಎಂಎಸ್) ಪರೀಕ್ಷೆಯಲ್ಲಿ ಕೊಡ್ಲಿಪೇಟೆಯ ಜಿ.ಹಂಸ ಉತ್ತೀರ್ಣಳಾಗಿ…

*ವಿಶೇಷ ಚೇತನರಿಂದ ಅರ್ಜಿ ಆಹ್ವಾನ*

ಜೂನ್ 18, 2026

*ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜೂನ್ 18, 2026

*ಪಟ್ಟಣಕ್ಕೆ ಬಂದ ಕಾಡು ಕುರಿ*

ಜೂನ್ 18, 2026

*ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 18, 2026

*ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*

ಜೂನ್ 18, 2026

*ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 

ಜೂನ್ 18, 2026

*’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*

ಜೂನ್ 18, 2026

*ಕೊಡವರಿಗೆ ವಿಶೇಷ ಸ್ಥಾನಮಾನ : ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ*

ಜೂನ್ 18, 2026

*ಮಡಿಕೇರಿಯಲ್ಲಿ ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ : ಯೋಗಪಟುಗಳಿಂದ ಯೋಗಪ್ರದಶ೯ನ : ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು : ಜಿ.ಚಿದ್ವಿಲಾಸ್ ಸಲಹೆ*

ಜೂನ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.