
ಮಡಿಕೇರಿ ಜೂ.18 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿಗೆ ಇಲಾಖೆಯ ಯೋಜನೆಗಳಾದ ಶುಲ್ಕ ಮರುಪಾವತಿ ಯೋಜನೆ, ವಿವಾಹ ಪ್ರೋತ್ಸಾಹ ಧನ, ಆರೈಕೆದಾರರ ಭತ್ಯೆ ಮತ್ತು ನಿರಾಮಯ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗೆ ಈ ಕಚೇರಿಗೆ ಅಥವಾ ಆಯಾಯ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ. 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂ.ಸಂ.08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.








