Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
  •  *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*
  • *ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*
  • *ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*
  • *ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

ಜೂನ್ 19, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 NEWS DESK : ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ಸಂಬಂಧ ಚರ್ಚಿಸಲಾಯಿತು. ಹಾಗೆಯೇ ಎಸ್‍ಡಿಪಿ ಮತ್ತು ನಾನ್ ಎಸ್‍ಡಿಪಿ ಯೋಜನೆಯನ್ನು ಮಾರ್ಪಡಿಸಿ ಕ್ರಿಯಾಯೋಜನೆ ತಯಾರಿಸುವ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ತುರ್ತು ಕುಡಿಯುವ ನೀರಿನ ಬಗ್ಗೆ, ವಿಶೇಷ ಅಭಿವೃದ್ಧಿ ಕಾರ್ಯಕ್ರಮ, ಜಲಜೀವನ್ ಮಿಷನ್ ಯೋಜನೆಗಳ ಕಾಮಗಾರಿ, ಡಿಸಿನ್ಫೆಕ್ಷನ್ ಯೂನಿಟ್, ಹರ್‍ಘರ್‍ಜಲ್ ವಿಷಯ, ನೀರಿನ ಗುಣಮಟ್ಟ ಪರೀಕ್ಷೆ ಹಾಗೂ ಇಎಫ್‍ಐ ಮತ್ತು ಇ.ಒ.ಟಿಗಳ ಕುರಿತು ಚರ್ಚಿಸಲಾಯಿತು. ಜಲಜೀವನ್ ಮಿಷನ್ ಯೋಜನಾ ಕಾಮಗಾರಿಗಳ ಕುಂದುಕೊರತೆ ಸಂಬಂಧಿಸಿದಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಮಾಹಿತಿ ಪಡೆದರು. ‘ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.’ ‘ಜಿಲ್ಲೆಯಲ್ಲಿ ಇದುವರೆಗೆ ಕಡಿಮೆ ಮಳೆಯಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು ಎಂದು ಆನಂದ್ ಪ್ರಕಾಶ್ ಮೀನಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.’ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಂಗ್ರಹಣೆ ಕೇಂದ್ರಗಳು ಹಾಗೂ ನೀರಿನ ಮೂಲಗಳ ಸ್ವಚ್ಛತೆಗೆ ಆದ್ಯತೆ ನೀಡಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಹೇಳಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಮಾತನಾಡಿ ಜಲಜೀವನ್ ಮಿಷನ್ 2.0 ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ವಿವರಿಸಿದರು. ಗ್ರಾಮೀಣ ಕುಡಿಯುವ ನೀರು ಪೂರೈಕೆ ಕುರಿತು ಮತ್ತು ಎಚ್‍ಜಿಜೆ ಘೋಷಣೆ, ಜಿಲ್ಲಾ ತಾಂತ್ರಿಕ ಘಟಕದಡಿ ಕೈಗೊಳ್ಳಲಾಗುವ ಕಾಮಗಾರಿ ಹಾಗೂ ಸುಜಲಾಂ ಭಾರತ್ ಆಪ್ ಮತ್ತು ಅಸೆಟ್ ಮ್ಯಾನೇಜ್‍ಮೆಂಟ್ ಆಪ್ ಅನುಷ್ಠಾನ ಕುರಿತು ಸಭೆಯ ಗಮನಕ್ಕೆ ತಂದರು. ಸ್ವಚ್ಛತೆ ಮತ್ತು ದುರಸ್ತಿ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಯಾಗಿರುವ ಗ್ರಾಮಗಳನ್ನು ಗುರುತಿಸಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕಾಮಗಾರಿಗಳಿಗೆ ಚಾಲನೆ ಮತ್ತಿತರ ಬಗ್ಗೆ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ಕೊಡಗು ಜಿಲ್ಲೆಯಾದ್ಯಂತ ಗ್ರಾಮೀಣ ಜನರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರನ್ನು ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆ, ತರ್ತು ಅಭಿವೃದ್ಧಿ ಕಾಮಗಾರಿಗಳು ಹಾಗೂ ನೀರಿನ ಗುಣಮಟ್ಟ ತಪಾಸಣೆಯ ಇತ್ತೀಚಿನ ಸಮಗ್ರ ಪ್ರಗತಿ ಪರಿಶೀಲನಾ ವರದಿಗಳು ಬಿಡುಗಡೆಯಾಗಿವೆ ಎಂದು ಕಾರ್ಯಪಾಲಕ ಎಂಜಿನಿಯರ್ ಹೇಳಿದರು. ಜಲ ಜೀವನ್ ಮಿಷನ್ ಜಿಲ್ಲೆಯಲ್ಲಿ ಒಟ್ಟು 3 ಹಂತಗಳಲ್ಲಿ ಕೈಗೆತ್ತಿಕೊಳ್ಳಲಾದ 457 ಕಾಮಗಾರಿಗಳ ಪೈಕಿ 370 ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಯೋಜನೆಗಳ ಒಟ್ಟು ಅಂದಾಜು ಮೊತ್ತ ರೂ.354.74 ಕೋಟಿ ಆಗಿದ್ದು, ಈಗಾಗಲೇ ರೂ.245.85 ಕೋಟಿ ಹಣವನ್ನು ಪ್ರಗತಿಗಾಗಿ ಖರ್ಚು ಮಾಡಲಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ಅವರು ಮಾಹಿತಿ ನೀಡಿದರು. ಪ್ರಸ್ತುತ 85 ಕಾಮಗಾರಿಗಳು ಪ್ರಗತಿಯಲ್ಲಿದ್ದು, 2 ಕಾಮಗಾರಿ ಕೈಬಿಡಲಾಗಿದೆ. ಪೂರ್ಣಗೊಂಡ ಯೋಜನೆಗಳಲ್ಲಿ 236 ಕಾಮಗಾರಿಯನ್ನು ಈಗಾಗಲೇ ಸಾರ್ವಜನಿಕ ಬಳಕೆಗೆ ಹಸ್ತಾಂತರಿಸಲಾಗಿದೆ. ಸೋಮವಾರಪೇಟೆಯ ಒಟ್ಟು 245 ಕಾಮಗಾರಿಗಳಲ್ಲಿ 229 ಪೂರ್ಣ (ಅತಿ ಹೆಚ್ಚು ಪ್ರಗತಿ), ವಿರಾಜಪೇಟೆ ಒಟ್ಟು 122 ಕಾಮಗಾರಿಗಳಲ್ಲಿ 81 ಪೂರ್ಣ, ಮಡಿಕೇರಿ ಒಟ್ಟು 90 ಕಾಮಗಾರಿಗಳಲ್ಲಿ 60 ಕಾಮಗಾರಿ ಪೂರ್ಣಗೊಂಡಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ ಹಾಗೂ ಪೆÇನ್ನಂಪೇಟೆ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಲು 2025-26ನೇ ಸಾಲಿನ 8 ಪ್ರಮುಖ ತುರ್ತು ಕಾಮಗಾರಿ ಗುರುತಿಸಲಾಗಿದೆ. ಅಲ್ಲದೆ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು, ಪಂಪ್ ಹಾಗೂ ಮೋಟಾರ್ ಅಳವಡಿಸುವುದು ಮತ್ತು ಕುಡಿಯುವ ನೀರಿನ ಪೈಪ್‍ಲೈನ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಲುಷಿತ ಮುಕ್ತ ನೀರನ್ನು ಖಚಿತಪಡಿಸಲು ಕೊಡಗು ವಿಭಾಗ ಮತ್ತು ಪೆÇನ್ನಂಪೇಟೆ ಉಪ ವಿಭಾಗದ ಒಟ್ಟು 2 ಪ್ರಯೋಗಾಲಯಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. 2026-27ನೇ ಹಣಕಾಸು ವರ್ಷದಲ್ಲಿ ಜೂನ್ 18, 2026 ರವರೆಗೆ ಜಿಲ್ಲೆಯ 288 ಹಳ್ಳಿಗಳಿಂದ 1,022 ನೀರಿನ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗಿದೆ. ಕೊಡಗು ವಿಭಾಗದಲ್ಲಿ ಪರೀಕ್ಷಿಸಲಾದ ಮಾದರಿಗಳಲ್ಲಿ 2 ನೀರಿನ ಮಾದರಿಗಳು ಕಲುಷಿತಗೊಂಡಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ಸೂಕ್ತ ಪರಿಹಾರ ಕ್ರಮ ಕೈಗೊಂಡಿರುವುದಾಗಿ ಕಾರ್ಯಪಾಲಕ ಎಂಜಿನಿಯರ್ ಅವರು ಹೇಳಿದರು. ವರ್ಷದ ಒಟ್ಟು ಗುರಿ 6 ಸಾವಿರ ಮಾದರಿಗಳಾಗಿದ್ದು, ಪ್ರಸ್ತುತ ಶೇ.17.03 ರಷ್ಟು ಪ್ರಗತಿ ಸಾಧಿಸಲಾಗಿದೆ. ಗ್ರಾಮೀಣ ಮಟ್ಟದ ಕ್ಷೇತ್ರ ಪರೀಕ್ಷಾ ಕಿಟ್‍ಗಳ ಮೂಲಕ 2,487 ನೀರಿನ ಮಾದರಿ ಪರೀಕ್ಷಿಸಿ, ಶೇ.53.34 ರಷ್ಟು ಗುರಿ ತಲುಪಲಾಗಿದೆ. ಏಪ್ರಿಲ್ 1 – ಜೂನ್ 18, 2026ರ ಮೂರು ತಿಂಗಳ ಅವಧಿಗೆ 1,500 ಮಾದರಿಗಳ ಗುರಿ ಹೊಂದಲಾಗಿತ್ತು, ಅದರಲ್ಲಿ 1,022 ಮಾದರಿ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ ಎಂದರು. ಜೂನ್ 1 ರಿಂದ ಜೂನ್ 18 ರವರೆಗಿನ ಅವಧಿಯಲ್ಲಿ ಒಟ್ಟು ಪರೀಕ್ಷಿಸಲಾದ 113 ಮಾದರಿಗಳಲ್ಲಿ, 69 ಮಾದರಿಗಳನ್ನು ಜಿಲ್ಲಾ ಲ್ಯಾಬ್‍ನಲ್ಲಿ ಮತ್ತು 44 ಮಾದರಿಗಳನ್ನು ತಾಲ್ಲೂಕು ಲ್ಯಾಬ್‍ನಲ್ಲಿ ಪರೀಕ್ಷಿಸಲಾಗಿದೆ. ಮಡಿಕೇರಿಯಲ್ಲಿ ಅತ್ಯಂತ ಹೆಚ್ಚು (43), ವಿರಾಜಪೇಟೆಯಲ್ಲಿ 28 ಮತ್ತು ಕುಶಾಲನಗರದಲ್ಲಿ 17 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಒಟ್ಟಾರೆಯಾಗಿ, ಕೊಡಗು ಜಿಲ್ಲೆಯು ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಹಾಗೂ ನೀರಿನ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರಶಂಸನೀಯ ಪ್ರಗತಿಯತ್ತ ಹೆಜ್ಜೆ ಇಡುತ್ತಿದೆ ಎಂದು ತಿಳಿಸಿದರು. ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಜವಾಹರ್ ನವೋದಯ ಶಾಲೆಗೆ ರೂ.78.50 ಲಕ್ಷ ವೆಚ್ಚದಲ್ಲಿ ಹೊಸ ನೀರು ಶುದ್ಧಿಕರಣ ಘಟಕ ನಿರ್ಮಾಣದ ಆಡಳಿತಾತ್ಮಕ ಅನುಮೋದನೆಗೆ ಚರ್ಚೆ ನಡೆಸಲಾಯಿತು. ವಾಟರ್ ಬಜೆಟ್, 20 ಓವರ್ ಹೆಡ್ ಟ್ಯಾಂಕ್‍ಗಳ ದುರಸ್ತಿ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಡ್ರೈವರ್-ಸಿಬ್ಬಂದಿ ಮುಂದುವರಿಕೆ ಕುರಿತು ಇದೇ ಸಂದರ್ಭ ಚರ್ಚಿಸಲಾಯಿತು. ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಟಿ.ಪಿ.ವಿರೇಂದ್ರ, ತಾಲ್ಲೂಕು ಆರೋಗ್ಯಧಿಕಾರಿ ಡಾ.ಸನತ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಕುಮಾರ್, ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಪುಟ್ಟಸ್ವಾಮಿ, ಸಹಾಯಕ ಎಂಜಿನಿಯರ್‍ಗಳು, ಕಿರಿಯ ಸಹಾಯ ಎಂಜಿನಿಯರ್‍ಗಳು, ಐಎಂಇಎಸ್, ಐಎಸ್‍ಎ ಸಿಬ್ಬಂದಿಗಳು, ಮಾದರಿ ಸಂಗ್ರಹ ತಂಡ, ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.22 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮುಖ್ಯಮಂತ್ರಿಯವರ…

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026

*ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*

ಆಗಷ್ಟ್ 22, 2026

*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*

ಆಗಷ್ಟ್ 22, 2026

*ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*

ಆಗಷ್ಟ್ 22, 2026

*ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.