
ಮಡಿಕೇರಿ NEWS DESK ಜೂ.22 : ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಂಬAಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು.
ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿಯ ಕುರಿತು ಸಂಸದರು ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.








