
ವಿರಾಜಪೇಟೆ ಜೂ.22 NEWS DESK : ವಿ ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಕಂಜಿತಂಡ ಗಿಣಿ ಮೊಣ್ಣಪ್ಪ ಅವರ ಪುತ್ರ ಕಂಜಿತಂಡ ಪೂವಣ್ಣ ಮತ್ತು ದೇಚಿ ಪೂವಣ್ಣ ದಂಪತಿಗಳು ಶಾಲಾ ಮಕ್ಕಳಿಗೆ ಒಂದು ವರ್ಷಕ್ಕೆ ಅಗತ್ಯವಿರುವ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಅಲ್ಲದೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿ ವಿತರಿಸಿ, ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು. ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಶಾಲೆಯ ಮುಖ್ಯೊಪದ್ಯಾಯರಾದ ಕೆ.ಸಿ.ಗೀತಾಂಜಲಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.









