
ಮಡಿಕೇರಿ ಜೂ.22 NEWS DESK : ನಗರದ ಪ್ರಮುಖ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿ – ನಗರಸಭೆಯು ಅಳವಡಿಸಿರುವ “ಶುದ್ಧ ನಗರಸಭೆಯ ಕುಡಿಯುವ ನೀರಿನ ಘಟಕ”ವು ಕಳೆದ ಕೆಲವು ದಿನಗಳಿಂದ ದುರಸ್ತಿಯಲ್ಲಿದ್ದು, ಕಾರ್ಯನಿರ್ವಹಿಸದ ಸ್ಥಿತಿಯಲ್ಲಿದೆ. ಇದರಿಂದಾಗಿ ನಿತ್ಯ ಸಂಚರಿಸುವ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರಿಗೆ ಕಡಿಮೆ ವೆಚ್ಚದಲ್ಲಿ ಅಥವಾ ಉಚಿತವಾಗಿ ಶುದ್ಧ ನೀರು ಒದಗಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ, ಪ್ರಸ್ತುತ ಈ ಯಂತ್ರವು ಕೆಟ್ಟುಹೋಗಿದ್ದು, ನೀರಿನ ಹನಿಗೂ ಜನ ಪರದಾಡುವಂತಾಗಿದೆ. ಈ ಘಟಕವು ನಿಷ್ಟ್ರಯೋಜಕವಾಗಿ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣವೇ ಮಡಿಕೇರಿ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಸುಲಭವಾಗಿ ಕುಡಿಯುವ ನೀರು ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ : ಸುಮನ್.ಎಸ್.ಲಾಲಿಪಾಳ್ಯ








