Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ ಮುಂದೂಡಿಕೆ*
  • *ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ*
  • *ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*
  • *ಜು.4 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಗೃಹಲಕ್ಷ್ಮಿ ಹಣ ದುರುಪಯೋಗ : ಗ್ಯಾರಂಟಿ ಅನುಷ್ಠಾನ ಸಮಿತಿ ಬಹಿರಂಗ ಪಡಿಸಲಿ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*
  • *ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*
  • *ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*

ಜೂನ್ 24, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ವಿಶೇಷ ಕೋಪ್ಟಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮ ರೂಪಿಸುವಂತೆ ನಿರ್ದೇಶನ ನೀಡಿದರು. ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ಶಿಬಿರವನ್ನು ಪ್ರತೀ ತಿಂಗಳು ಏರ್ಪಡಿಸುವಂತಾಗಬೇಕು. ಧೂಮಪಾನ ಮಾಡುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಶಾಲಾ-ಕಾಲೇಜುಗಳಲ್ಲಿ ರ್ಯಾಲಿ, ಜಾಥಾ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲು ಕ್ರಮವಹಿಸಲಾಗಿದೆ. ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ, ಹಾಗೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೀಗೆ ವಿವಿಧ ಇಲಾಖೆ ಜೊತೆ ಸಮನ್ವಯತೆ ಸಾಧಿಸಿ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮ ಅಧಿಕಾರಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವಂತಿಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ದಂಡ ವಿಧಿಸಲಾಗುತ್ತದೆ ಎಂದರು. ಸೆಕ್ಷನ್ 4 ಪ್ರಕಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತಿತರ ಪ್ರದೇಶಗಳಲ್ಲಿ ತಂಬಾಕು ನಿಷೇಧಿತ ಪ್ರದೇಶವೆಂದು ನಾಮಫಲಕ ಅಳವಡಿಸಬೇಕು ಎಂದು ತಿಳಿಸಿದರು. 21 ವರ್ಷದೊಳಗಿನ ವ್ಯಕ್ತಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ-ಕಾಲೇಜು ವ್ಯಾಪ್ತಿಯ 100 ಮೀ. ಅಂತರದಲ್ಲಿ ಸಿಗರೇಟ್ ಅಥವಾ ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಉಲ್ಲಂಘನೆ ಮಾಡಿದ್ದಲ್ಲಿ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದರು. ಕೋಟ್ಪಾ ಕಾಯ್ದೆಯಡಿ ಜಿಲ್ಲೆಯ ಹಲವು ಕಡೆಗಳಲ್ಲಿ ಏಪ್ರಿಲ್ –ಮೇ ತಿಂಗಳಲ್ಲಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಸೆಕ್ಷನ್ 4 ರ ಪ್ರಕಾರ 272 ಪ್ರಕರಣ ದಾಖಲಾಗಿದ್ದು, 45,700 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದರು. ಅತಿಸಾರ ಭೇದಿ ನಿಯಂತ್ರಣ ಕ್ರಮ: ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಅತಿಸಾರ ಭೇದಿ ತಡೆಯುವಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜುಲೈ, 31 ರವರೆಗೂ ಈ ಬಗ್ಗೆ ಜಾಗೃತಿ ನಡೆಯಲಿದೆ ಎಂದರು. ಶಿಶು ಮರಣ ತಡೆಯುವುದು ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ 5 ವರ್ಷದೊಳಗಿನ ಮಕ್ಕಳು ಅತೀಸಾರ ರೋಗದಿಂದ ಮರಣ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆಗಳು ಹೆಚ್ಚಿನ ಮಾಹಿತಿ ನೀಡುವಲ್ಲಿ ಶ್ರಮಿಸಲಾಗಿದೆ ಎಂದರು. ರಾಷ್ಟ್ರದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಓಆರ್‍ಎಸ್ ಮತ್ತು ಜಿಂಕ್ ಹೆಚ್ಚು ಬಳಕೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದರು. ಮಾಹಿತಿ ಶಿಕ್ಷಣ ಮತ್ತು ಸಂವಹನ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಜಲಜೀವನ್ ಮಿಷನ್, ಪಂಚಾಯತ್ ರಾಜ್, ಆಹಾರ, ಶಿಕ್ಷಣ, ಹೀಗೆ ವಿವಿಧ ಇಲಾಖೆಗಳ ಜೊತೆ ಸಮನ್ವಯತೆ ಸಾಧಿಸಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಸ್ವಚ್ಛತೆ ಮತ್ತು ಆರೋಗ್ಯ ಶಿಕ್ಷಣ ನೀಡುವುದು, ನಗರದ ಪ್ರದೇಶದಲ್ಲಿ ಸಂಚಾರಿ ಆರೋಗ್ಯ ತಂಡ ರಚಿಸುವುದು ಮತ್ತಿತರ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಹೇಳಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ, ಮಲೇರಿಯಾ, ಮತ್ತಿತರ ರೋಗಗಳು ಹರಡದಂತೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ ಮೇ ವರೆಗೆ ಟೈಪಾಯಿಡ್ ಜ್ವರದಿಂದ 101 ಪ್ರಕರಣ, ನಾಯಿ ಕಡಿತದಿಂದ 2,961, ಹಾವು ಕಡಿತದಿಂದ 101, ಭೇದಿಯಿಂದ 942, ಡೆಂಗ್ಯೂವಿನಿಂದ 16, ಇಲಿ ಜ್ವರದಿಂದ 23, ತೀವ್ರ ಉಸಿರಾಟ 8, ಶ್ವಾಸಕೋಶ ಸಂಬಂಧಿಸಿದ ಕಾಯಿಲೆಗೆ 2513 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಧುಸೂದನ್, ಡಾ.ಶ್ರೀನಿವಾಸ್, ಡಾ.ಸನತ್ ಕುಮಾರ್, ಡಾ.ಆನಂದ್, ಡಾ.ಯತಿರಾಜು, ಡಾ.ಇಂದುದರ, ಡಾ.ಅನಿಲ್ ದವನ್ ಅವರು ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ ಮುಂದೂಡಿಕೆ*

ಜೂನ್ 25, 2026

*ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ*

ಜೂನ್ 25, 2026

*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*

ಜೂನ್ 25, 2026

*ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ*

ಜೂನ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.25 NEWS DESK : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷರಾದ …

*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*

ಜೂನ್ 25, 2026

*ಜು.4 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ*

ಜೂನ್ 25, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಜೂನ್ 25, 2026

*ಗೃಹಲಕ್ಷ್ಮಿ ಹಣ ದುರುಪಯೋಗ : ಗ್ಯಾರಂಟಿ ಅನುಷ್ಠಾನ ಸಮಿತಿ ಬಹಿರಂಗ ಪಡಿಸಲಿ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಜೂನ್ 25, 2026

*ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*

ಜೂನ್ 24, 2026

*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 24, 2026

*ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*

ಜೂನ್ 24, 2026

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 2026

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.