Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 24, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.24 NEWS DESK : ಜಿಲ್ಲೆಯಾದ್ಯಂತ ಇದೇ ಜೂನ್ 28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಅಗತ್ಯ ಸಿಬ್ಬಂದಿಗಳು ಹಾಗೂ ವಾಹನಗಳ ನಿಯೋಜನೆ, ನಿರಂತರ ವಿದ್ಯುತ್ ಪೂರೈಕೆ, ಅಂಗನವಾಡಿ ಮತ್ತು ಶಾಲಾ- ಕಾಲೇಜುಗಳಲ್ಲಿ ಇತರೆ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡಲು ವ್ಯವಸ್ಥೆ ಮಾಡುವುದು ಮತ್ತಿತರ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 5 ವರ್ಷದವರೆಗಿನ ಒಟ್ಟು 29,011 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 2,638, ಗ್ರಾಮೀಣ ಭಾಗದಲ್ಲಿ 26,373 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,52,210 ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ 55,399, ಗ್ರಾಮೀಣ ಭಾಗದಲ್ಲಿ 4,99,811 ಜನ ಸಂಖ್ಯೆ ಇದೆ. ಇವರಲ್ಲಿ ವಲಸಿಗ ಮಕ್ಕಳ ಸಂಖ್ಯೆ 1297 ಮತ್ತು ಸ್ಥಿರವಾಸಿತ ವಲಸೆ ಜನಸಂಖ್ಯೆಯು 15,927 ಸೇರಿ ಒಟ್ಟು 17,224 ಇರುತ್ತದೆ ಎಂದು ಅವರು ಮಾಹಿತಿ ನೀಡಿದರು. ಇದೇ ಜೂನ್ 28 ರಂದು ಬೆಳಗ್ಗೆ 8 ರಿಂದ ಬೂತ್ ಮಟ್ಟದಲ್ಲಿ ಪೋಲಿಯೋ ಹನಿ ನೀಡಲಾಗುತ್ತದೆ. ಜಿಲ್ಲೆಗೆ ಪ್ರವಾಸಿಗರು ಆಗಮಿಸುವುದರಿಂದ ಹಾಗೂ ಸ್ಥಿರವಾಸಿತ ವಲಸೆ ಮಕ್ಕಳ ಸಂಖ್ಯೆಯೂ ಹೆಚ್ಚಿರುವುದರಿಂದ ಮೂರು ದಿನಗಳ ಕಾಲ ನಗರ, ಪಟ್ಟಣ ಪ್ರದೇಶ ಭೇಟಿ ನೀಡಿ ಪೋಲಿಯೋ ಹನಿ ನೀಡಲಾಗುತ್ತದೆ ಎಂದು ಅವರು ವಿವರಿಸಿದರು. ಜಿಲ್ಲೆಯಲ್ಲಿ ಒಟ್ಟು 1,42,030 ಮನೆಗಳಿದ್ದು, ಈ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ ಒಟ್ಟು 471 ಬೂತ್‍ಗಳನ್ನು ಗುರುತಿಸಲಾಗಿದೆ. 33 ಸಂಚಾರಿ ತಂಡ, 1 ಮೊಬೈಲ್ ಸಂಚಾರಿ ತಂಡ ರಚಿಸಲಾಗಿದೆ. ಒಟ್ಟು 1952 ಲಸಿಕೆದಾರರನ್ನು ಗುರುತಿಸಲಾಗಿದ್ದು, ಮನೆ ಮನೆ ಭೇಟಿ ನೀಡಲು ಒಟ್ಟು 976 ತಂಡಗಳನ್ನು ರಚಿಸಲಾಗಿದೆ. ಒಟ್ಟು 84 ಮೇಲ್ವಿಚಾರಕರನ್ನು ಗುರುತಿಸಲಾಗಿದೆ. ಇವರುಗಳಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಿಂದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು. ಈಗಾಗಲೇ ವಿವಿಧ ಇಲಾಖೆಗಳ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡಲಾಗಿದೆ. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸ್ತ್ರೀ ಶಕ್ತಿ ಗುಂಪುಗಳ ಪದಾಧಿಕಾರಿಗಳು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶೇಕಡವಾರು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದರು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ಮೂಲಕ ಸ್ಥಳೀಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯುವಂತಾಗಲು ಜನ ಜಾಗೃತಿ ಮೂಡಿಸಲಾಗಿದೆ. ಬ್ಯಾನರ್‍ಗಳನ್ನು ಬರೆಸಿ ಹಾಗೂ ಬಿತ್ತಿ ಪತ್ರಗಳನ್ನು ಮುದ್ರಿಸಿ ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅಗತ್ಯ ವಾಹನಗಳ ನಿಯೋಜನೆ ಮಾಡುವುದು, ಬಸ್ ನಿಲ್ದಾಣಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯಲು ಅರಿವು ಮೂಡಿಸುವುದು, ಕಾರ್ಮಿಕ ಇಲಾಖೆ ಮೂಲಕ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಕ್ರಮವಹಿಸಲಾಗಿದೆ ಎಂದರು. ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸುವುದು, ವಿವಿಧ ಸಂಘ, ಸಂಸ್ಥೆಗಳು ಪಲ್ಸ್ ಪೋಲಿಯೋ ಯಶಸ್ಸಿಗೆ ಕೈಜೋಡಿಸುವುದು, ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಇರುವ ಗ್ರಾಮಗಳು, ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ವಿತರಿಸುವುದು, ಹಾಗೆಯೇ ವಿವಿಧ ಧಾರ್ಮಿಕ ಮುಖಂಡರು ಸಹ ಪಲ್ಸ್ ಪೋಲಿಯೋ ಲಸಿಕೆ ಮಹತ್ವ ಬಗ್ಗೆ ಜಾಗೃತಿ ಮೂಡಿಸುವುದು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ಘಟಕಕ್ಕೆ ಸ್ಥಳಾವಕಾಶ ನೀಡಿ ಲಸಿಕೆ ಪಡೆಯಲು ಅವಕಾಶ ಮಾಡುವುದು. ಹೀಗೆ ವಿವಿಧ ಇಲಾಖೆಗಳ ಸಹಕಾರ ಪಡೆಯಲಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ಹೇಳಿದರು. ಸೆಸ್ಕ್ ಇಇ ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್ಸೆಪೆಕ್ಟರ್ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಈರಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮಡಿಕೇರಿ ದಸರಾ ಮಹೋತ್ಸವದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ…

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.