
ಮಡಿಕೇರಿ ಜೂ.25 NEWS DESK : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಅವಾರ್ಡ್ (Florence Nightingale Award)- 2026 ಲಭಿಸಿದೆ. ನರ್ಸಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಗೆ ಈ ಪ್ರಶಸ್ತಿ ಲಭಿಸಿದ್ದು, ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಿ.ಐ.ಚಿತ್ರಾವತಿ ಅವರ ಸಾಧನೆಗೆ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಶ್ಲಾಘನೆ ವ್ಯಕ್ತಪಡಿಸಿದೆ.









