
ಮಡಿಕೇರಿ ಜೂ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿಯು ಜೂ.27 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ, ಕೊಡಗು ಗೌಡ ವಿದ್ಯಾನಿಧಿ ಅಧ್ಯಕ್ಷರಾದ ಅಂಬೆಕಲ್ ನವೀನ್, ಕೊಡಗು ಗೌಡ ಸಮಾಜದ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಡಿ.ಎಸ್.ಆನಂದ್, ಒಕ್ಕಲಿಗರ ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ವಿ.ಜಿ.ಮೋಹನ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪವಿಭಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯ ನಿರ್ದೇಶಕರಾದ ಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ,.ಸಿ.ಬಿ.ರಾಮಚಂದ್ರ ಅವರು ಉಪನ್ಯಾಸ ನೀಡಲಿದ್ದಾರೆ.









