Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು : ಭೂಮಿ ಖರೀದಿಗೆ ಕಡಿವಾಣ ಅಗತ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು : ಭೂಮಿ ಖರೀದಿಗೆ ಕಡಿವಾಣ ಅಗತ್ಯ*

ಜೂನ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜೂ.30 : ಕೊಡಗು ಜಿಲ್ಲೆಯ ಭೂಮಿಯನ್ನು ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ 10 ವರ್ಷಗಳಲ್ಲಿ ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು ಮತ್ತು ಮೂಲ ಸಂಸ್ಕೃತಿಯ ಮೇಲೆ ಪರಿಣಾಮ ಬೀರಬಹುದು ಎಂದು ಕೊಡಗು ಹಾಗೂ ಕಾವೇರಿ ಸಂರಕ್ಷಣಾ ವೇದಿಕೆಯ ಸಂಚಾಲಕ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊರಗಿನವರು ಭೂಮಿ ಖರೀದಿ ಮಾಡುವುದನ್ನು ನಿಯಂತ್ರಿಸಲು ಸರಕಾರ ಹೊಸ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಬಳಿಯ ಮಲ್ಮ ಬೆಟ್ಟ ವ್ಯಾಪ್ತಿಯಲ್ಲಿ ಹೊರ ಭಾಗದ ವ್ಯಕ್ತಿಯೊಬ್ಬರು ದೊಡ್ಡ ಪ್ರಮಾಣದ ಭೂಮಿಯನ್ನು ಖರೀದಿಸಿದ್ದಾರೆ. ಈ ಬೆಟ್ಟ ಪವಿತ್ರ ನೆಲೆಯಾಗಿದ್ದು, ಕಾಮಗಾರಿ ನಡೆಸುವ ಸಂದರ್ಭ ವಿರೋಧ ವ್ಯಕ್ತವಾಗಿದೆ. ಈ ಕಾರಣದಿಂದ ಉದ್ದೇಶಿತ ಯೋಜನೆಯನ್ನು ಭೂಮಿ ಖರೀದಿದಾರರು ಕೈಬಿಟ್ಟಿರುವುದಾಗಿ ಘೋಷಿಸಿದ್ದಾರೆ. ಇದು ತಾತ್ಕಾಲಿಕ ಸಮಾಧಾನವಾಗಿದ್ದು, ಮುಂದಿನ ದಿನಗಳಲ್ಲಿ ಹೊರ ರಾಜ್ಯದ ಮಂದಿ ಜಿಲ್ಲೆಯ ದೇವರಕಾಡು ಸೇರಿದಂತೆ ಪವಿತ್ರ ಸ್ಥಳಗಳನ್ನು ಖರೀದಿಸಿ ಪ್ರಕೃತಿಗೆ ವಿರುದ್ಧವಾದ ಕಾಮಗಾರಿ ನಡೆಸುವ ಅಪಾಯವಿದೆ ಎಂದು ತಿಳಿಸಿದರು. ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲ ವ್ಯಾಪ್ತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಮೂಲದವರು ಜಾಗ ಖರೀದಿ ಮಾಡಿದ್ದಾರೆ. ಇದರಿಂದ ಸ್ಥಳೀಯರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಬರಲಿದೆ ಎಂದು ಗಮನ ಸೆಳೆದರು. *ಕಾನೂನು ಜಾರಿಗೆ ಆಗ್ರಹ* ಈಗಾಗಲೇ ಜಿಲ್ಲೆಯ ಬೃಹತ್ ಹೋಂಸ್ಟೇಗಳು ಮತ್ತು ರೆಸಾರ್ಟ್ಗಳು ಹೊರ ಭಾಗದವರ ಮಾಲೀಕತ್ವದಲ್ಲಿದೆ. ಇದರಿಂದ ಜಿಲ್ಲೆಯ ಮೂಲ ಸಂಸ್ಕೃತಿ ಮರೆಯಾಗುತ್ತಿದೆ. ಹೊರಗಿನವರು ಭೂಮಿ ಖರೀದಿಸುವುದನ್ನು ತಡೆಯಲು, ಜಮ್ಮಾ ಅಲ್ಲದ ಮತ್ತು ಕೊಡಗಿನ ಸ್ಥಳೀಯ ಸಮುದಾಯಗಳಿಗೆ ಸೇರದ ಜನರಿಗೆ ಭೂಮಿ ಮಾರಾಟ ಮಾಡುವುದನ್ನು ತಡೆಯುವ ಕಾನೂನು ಜಾರಿ ತರುವುದು ಅಗತ್ಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಸಂಸದ ಯದುವೀರ್ ಒಡೆಯರ್ ಅವರುಗಳು ತುರ್ತು ಕ್ರಮಕ್ಕೆ ಮುಂದಾಗಬೇಕು. ದೇಶದ ಈಶಾನ್ಯ ರಾಜ್ಯಗಳಾದ ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಅರುಣಾಚಲ ಪ್ರದೇಶ, ಉತ್ತರಾಖಂಡದ ಹಲವಾರು ಜಿಲ್ಲೆಗಳಲ್ಲಿ ಇಂತಹ ಕಾನೂನು ಜಾರಿಯಲ್ಲಿದೆ. ಕರ್ನಾಟಕ ರಾಜ್ಯ ಸರಕಾರ ಕೂಡ ಕೊಡಗು ಜಿಲ್ಲೆಗೆ ಇದೇ ರೀತಿಯ ಕಾನೂನು ಜಾರಿಗೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಕನ್ನಿ ಕಾವೇರಿ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಮಲ್ಚೀರ ಶಾನ್ ಬೋಪಯ್ಯ ಅವರು ಮಾತನಾಡಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದೆ ಪರಿಸ್ಥಿತಿ ಹದಗೆಟ್ಟಿದೆ. ಇದರಿಂದ ಕರ್ನಾಟಕ ಮಾತ್ರವಲ್ಲದೇ ಕೇರಳ, ತಮಿಳುನಾಡು ರಾಜ್ಯಗಳು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರಿತಪಿಸುವ ಪರಿಸ್ಥಿತಿ ಎದುರಾಗುತ್ತದೆ. ರಾಜ್ಯ ಸರಕಾರ ಕೊಡಗಿನಲ್ಲಿ ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಂಬoಧಿಸಿದoತೆ ಹೊಸ ಕಾನೂನು ರೂಪಿಸುವ ಅಗತ್ಯವಿದೆ. ಇದಕ್ಕೆ ಕೊಡಗು ಜಿಲ್ಲೆಯ ಎಲ್ಲಾ ಮೂಲ ನಿವಾಸಿಗಳು ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಹಾಗೂ ಕಾವೇರಿ ಸಂರಕ್ಷಣಾ ವೇದಿಕೆಯ ಸದಸ್ಯ ರಾಯ್ ಬೋಪಣ್ಣ, ಪುಚ್ಚಿಮಂಡ ಅಪ್ಪಯ್ಯ ಹಾಗೂ ಕನ್ನಿ ಕಾವೇರಿ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಕೆ.ಪೂವಯ್ಯ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಶತಮಾನೋತ್ಸವ ಕಂಡಿರುವ ಹೆಮ್ಮೆಯ ಸಂಸ್ಥೆ ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ…

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.