
ಮಡಿಕೇರಿ ಜು.1 NEWS DESK : ಬೆಂಗಳೂರಿನ ಶ್ರೀ ಕಂಠೀರವ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನವನ್ನು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನೇರ ಪ್ರಸಾರ ಮೂಲಕ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳನ್ನು ಸೇವನೆ ಮತ್ತು ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಯಿತು. ವಿರಾಜಪೇಟೆಯ ಡಿವೈಎಸ್‍ಪಿ ಎಸ್. ಮಹೇಶ್ ಕುಮಾರ್ ಮತ್ತು ವಿರಾಜಪೇಟೆ ನಗರದ ಸಬ್ ಇನ್ಸ್ಪೆಕ್ಟರ್ ಹೆಚ್.ಎಸ್.ಪ್ರಮೋದ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅರುಣ್ ಮತ್ತು ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









