
ಮಡಿಕೇರಿ ಜು.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ಯು ಜು.2 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ, ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕುಶಾಲನಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಎನ್.ಮೂರ್ತಿ, ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.








