
ಮಡಿಕೇರಿ NEWS DESK ಜು.1 : ಮುಖ್ಯಮoತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇoದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಕುಮಾರಕೃಪಾ ರಸ್ತೆಯ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರವನ್ನು ಸ್ಮರಿಸಿದರು. ಸಮಾರಂಭದಲ್ಲಿ ತೆಲoಗಾಣ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ವಾರ್ತಾಭಾರತಿ ಪ್ರಧಾನ ಸoಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸoಘದ ಅಧ್ಯಕ್ಷರಾದ ಶಿವಾನoದ ತಗಡೂರು, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯಿಷಾ ಖಾನo, ವಾರ್ತಾ ಇಲಾಖೆ ಆಯುಕ್ತರಾದ ಎo.ಎನ್. ಅನುಚೇತ್, ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.








