
ಮಡಿಕೇರಿ ಜು.1 NEWS DESK : ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಪಣೀಂದ್ರ ಅವರು ಜುಲೈ, 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜುಲೈ, 03 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆವರೆಗೆ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪ ಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿ ವಿಚಾರಣೆ ನಡೆಸಲಿದ್ದಾರೆ. ಆದ್ದರಿಂದ ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿರುವ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಂದ ಹೊಸದಾಗಿ ಯಾವುದೇ ದೂರು ಸ್ವೀಕರಿಸಲಾಗುವುದಿಲ್ಲ’ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ದಿನಕರ್ ಶೆಟ್ಟಿ ಅವರು ತಿಳಿಸಿದ್ದಾರೆ.








