Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*
  • *ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*
  • *ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*
  • *ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*
  • *ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*
  • ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ
  • *ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*
  • *ಒಂದಕ್ಕಿoತ ಹೆಚ್ಚು ವೋಟರ್ ಐಡಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎನ್‌ಸಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*

ಜುಲೈ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK : ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ಮತ್ತು ಕೊಡಗಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜು.6 ರಂದು ಮಡಿಕೇರಿಯಲ್ಲಿ ಬೃಹತ್ ವಾಹನ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಕಾಡಾನೆ ದಾಳಿಗೆ ಸಿಲುಕಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಅಂಗವೈಕಲ್ಯತೆಗೆ ಒಳಗಾಗುತ್ತಿದ್ದಾರೆ. ರೈತರು ಕೃಷಿ ಫಸಲು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೂ ರಾಜ್ಯ ಸರಕಾರ ಪರಿಹಾರ ನೀಡುತ್ತಿಲ್ಲ. ಹುಲಿ ಹಾಗೂ ಚಿರತೆ ದಾಳಿಯಿಂದ ಜಾನುವಾರುಗಳು, ಸಾಕುಪ್ರಾಣಿಗಳು ಬಲಿಯಾಗುತ್ತಿವೆ. ವನ್ಯಜೀವಿಗಳ ನಿರಂತರ ದಾಳಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸಿ ಮತ್ತು ಡಿ ಭೂಮಿಯಲ್ಲಿ ಕಳೆದ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡವರು ಹಾಗೂ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರನ್ನು ರಾಜ್ಯ ಸರಕಾರ ಹಕ್ಕು ಪತ್ರ ನೀಡದೆ ಒಕ್ಕಲಬ್ಬಿಸಲು ಪ್ರಯತ್ನಿಸುತ್ತಿದೆ. ಹಿಡುವಳಿ ಭೂಮಿಯಲ್ಲಿರುವ ಮರದ ಮಾಲೀಕತ್ವದ ಹಕ್ಕನ್ನು ನೀಡದೆ ಸರಕಾರವೇ ಅರಣ್ಯ ಇಲಾಖೆಯ ಮೂಲಕ ಮರಗಳ ಗಣಕೀಕರಣ ಮಾಡುತ್ತಿರುವುದು ಮುಂದಿನ ದಿನಗಳಲ್ಲಿ ಮರದ ಮಾಲೀಕತ್ವವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್, ವಸತಿ ಮತ್ತು ಹಕ್ಕುಪತ್ರ ನೀಡದೆ ಸರಕಾರ ವಂಚಿಸುತ್ತಿದೆ ಎಂದು ಆರೋಪಿಸಿದರು. ಈ ಹಿಂದೆ ಭಾರತೀಯ ಜನತಾ ಪಾರ್ಟಿ ಪ್ರತಿಭಟನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕಾಗಿ ಅಭಿಪ್ರಾಯ ಕ್ರೋಢೀಕರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸುವಂತೆ ಮನವಿ ಮಾಡಿದರೂ ಆಡಳಿತ ನಡೆಸುತ್ತಿರುವ ಜಿಲ್ಲೆಯ ಜನಪ್ರತಿನಿಧಿಗಳು ಪ್ರತಿಷ್ಠೆಗಾಗಿ ಸಭೆ ನಡೆಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಟೀಕಿಸಿದರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸರಕಾರ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಸೋಮವಾರ ಎಲ್ಲಾ ಭಾಗಗಳಿಂದ ವಾಹನಗಳ ಜಾಥಾ ಸಾಗಿ ಬರಲಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡು, ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಾಗುವುದು. ಪ್ರತಿಭಟನೆಯಲ್ಲಿ ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಪಕ್ಷದ ಎಲ್ಲಾ ಕಾರ್ಯಕರ್ತರು, ರೈತರು, ಕಾರ್ಮಿಕರು, ಸಂಘ ಸಂಸ್ಥೆಗಳ ಪ್ರಮುಖರು, ವಾಹನ ಮಾಲೀಕರು, ಚಾಲಕರು, ವಿವಿಧ ಸಮಾಜಗಳ ಪ್ರಮುಖರು ಹಾಗೂ ನಾಗರೀಕರು ಸ್ವಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರವಿ ಕಾಳಪ್ಪ ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ಜಿಲ್ಲೆಯ ಐದೂ ತಾಲ್ಲೂಕುಗಳಿಂದ ವಾಹನ ಜಾಥಾ ಬರಲಿದೆ ಮತ್ತು ನಗರದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಈ ಪ್ರತಿಭಟನೆಗೆ ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯನ್ನು ಕಾಡುತ್ತಿರುವ ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರಕಾರ 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಮಾತನಾಡಿ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಮಲೆನಾಡಿನ ಶಾಸಕರಿಗೆ ಅರಣ್ಯ ಖಾತೆ ನೀಡುವಂತೆ ಮನವಿ ಮಾಡಿದರು. ವನ್ಯಜೀವಿಗಳ ಉಪಟಳದ ಕುರಿತು ಸಂಪೂರ್ಣ ಮಾಹಿತಿ ಇರುವ ಮಲೆನಾಡು ಭಾಗದವರು ಅರಣ್ಯ ಸಚಿವರಾದರೆ ಸಮಸ್ಯೆಗೆ ಸೂಕ್ತ ಪರಿಹಾರ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದಶಿಗಳಾದ ವಿ.ಕೆ.ಲೋಕೇಶ್, ಮಹೇಶ್ ಜೈನಿ ಹಾಗೂ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.2 NEWS DESK : ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ…

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*

ಜುಲೈ 2, 2026

*ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*

ಜುಲೈ 2, 2026

*ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*

ಜುಲೈ 2, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*

ಜುಲೈ 2, 2026

ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ

ಜುಲೈ 2, 2026

*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*

ಜುಲೈ 2, 2026

*ಒಂದಕ್ಕಿoತ ಹೆಚ್ಚು ವೋಟರ್ ಐಡಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎನ್‌ಸಿ*

ಜುಲೈ 2, 2026

*ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*

ಜುಲೈ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.