Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*
  • *ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*
  • *ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*
  • *ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*
  • *ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*
  • ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ
  • *ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*
  • *ಒಂದಕ್ಕಿoತ ಹೆಚ್ಚು ವೋಟರ್ ಐಡಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎನ್‌ಸಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.2 NEWS DESK : ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲವು ಅನಧೀಕೃತ ಮತ್ತು ಪರವಾನಗಿ ರಹಿತ ಮಾರಾಟಗಾರರು ರೈತರಿಗೆ ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ದೂರುಗಳು ಕಂಡು ಬರುತ್ತಿದೆ. ಇಂತಹ ಕೃತ್ಯಗಳಿಂದ ರೈತರು ಆರ್ಥಿಕ ನಷ್ಟ ಅನುಭವಿಸುದಲ್ಲದೆ, ಕೃಷಿ ಉತ್ಪಾದನೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು ಮತ್ತು ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡಬೇಕು. ಅಧಿಕಾರಿಗಳು, ಮಾರಾಟಗಾರರು ಮತ್ತು ವಿತರಕರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿಯವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರ ಬಳಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಅವರು ಸೂಚಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ರೈತರ ಹಿತರಕ್ಷಣೆಯನ್ನು ಕಾಯುವ ದೃಷ್ಟಿಯಿಂದ ಕೃಷಿ ಇಲಾಖೆಯು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಜಿಲ್ಲೆಯಾದ್ಯಂತ ನಕಲಿ ಬೀಜ ಮತ್ತು ಕೀಟನಾಶಕಗಳ ಮಾರಾಟಗಾರರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಸಕಾಲದಲ್ಲಿ ಪೂರೈಸಲಾಗುವುದು ಎಂದರು. ಜಿಲ್ಲೆಯಾದ್ಯಂತ ಇರುವ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟ ಮಳಿಗೆಗಳು, ಗೋದಾಮುಗಳು ಹಾಗೂ ಸಾಗಾಣಿಕೆ ವಾಹನಗಳ ಮೇಲೆ ಕಾರ್ಯಪಡೆಯು ನಿರಂತರವಾಗಿ ಆಕಸ್ಮಿಕ ದಾಳಿಗಳನ್ನು ನಡೆಸಿ, ದಾಸ್ತಾನು ಮತ್ತು ಗುಣಮಟ್ಟವನ್ನು ಪರಿಶೀಲಿಸಲಾಗುವುದು. ಅನುಮಾನಾಸ್ಪದ ಬಿತ್ತನೆ ಬೀಜ ಹಾಗೂ ಕೀಟನಾಶಗಳ ಮಾದರಿಗಳನ್ನು ತಕ್ಷಣವೇ ಸಂಗ್ರಹಿಸಿ, ಆದ್ಯತೆಯ ಮೇರೆಗೆ ಗುಣನಿಯಂತ್ರಣ ಪ್ರಯೋಗಾಲಯಗಳಿಗೆ ಕಳುಹಿಸಿ ವರದಿ ಪಡೆದು ಕ್ರಮ ಕೈಗೊಳ್ಳಲಾಗವುದು ಎಂದು ತಿಳಿಸಿದರು. ಗಡಿ ಭಾಗಗಳಲ್ಲಿ ನಿಗಾ ವಹಿಸುವುದು, ಸಬ್ಸಿಡಿ ಗೊಬ್ಬರದ ದುರ್ಬಳಕೆ ತಡೆಗಟ್ಟುವುದು, ಬಲವಂತದ ಜೋಡಣೆ ಮಾರಾಟಕ್ಕೆ ಕಠಿಣ ನಿಷೇಧ, ನಕಲಿ ಮತ್ತು ಕಳಪೆ ರಸಗೊಬ್ಬರಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. 2026-27ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಪರ್ ಡ್ರಾಪ್ ಮೋರ್ ಕ್ರಾಪ್(ಪಿಎಂಆರ್‍ಕೆವಿವೈ-ಪಿಡಿಎಂಸಿ) ಘಟಕದಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದ ಕೇಂದ್ರ ಮತ್ತು ರಾಜ್ಯದ ಕಡ್ಡಾಯ ಪಾಲಿನ ಸಹಾಯಧನಕ್ಕೆ ತಾಲ್ಲೂಕುವಾರು, ಘಟಕವಾರು ಹಾಗೂ ಉಪ ಶೀರ್ಷಿಕೆವಾರು ಭೌತಿಕ ಮತ್ತು ಆರ್ಥಿಕ ಕ್ರಿಯಾ ಯೋಜನೆಗೆ ಜಿಲ್ಲೆಗೆ 281.80 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಗ್ರಾಮೀಣ ಭಾಗದ ಜನರು ಕೊಳವೆ ಬಾವಿಗಳಿಗೆ ಹೆಚ್ಚು ಅವಲಂಬಿತರಾಗಿದ್ದು, ಅವಶ್ಯಕತೆ ಇದ್ದಲ್ಲಿ ಮಾತ್ರ ಕಾರ್ಯಗತಗೊಳಿಸುವಂತೆ ತಿಳಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಆರಂಭವಾಗಿದ್ದು, 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 78.29ರಷ್ಟು ಸಮೀಕ್ಷೆ ಪ್ರಗತಿ ಸಾಧಿಸಿದೆ. 2026-27ನೇ ಸಾಲಿನಲ್ಲಿ ಒಟ್ಟು 296440 ತಾಕುಗಳಲ್ಲಿ 35510 ಕೃಷಿಯೇತರ ತಾಕುಗಳಿದ್ದು, 260930 ತಾಕುಗಳನ್ನು ಸರ್ವೆ ಕಾರ್ಯ ಮಾಡಬೇಕಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರಮುಖ ಬೆಳೆಯಾದ ಭತ್ತ(ಮಳೆಯಾಶ್ರಿತ) ಬೆಳೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಸೂಚಿಸಲಾಗಿದ್ದು, ಹೋಬಳಿ ಮಟ್ಟದಲ್ಲಿ ಭತ್ತ ನೀರಾವರಿ ಮತ್ತು ಮುಸುಕಿನ ಜೋಳ ಮಳೆಯಾಶ್ರಿತ ಎಂದು ಅಧಿಸೂಚಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಕೊಡಗು ಜಿಲ್ಲೆಗೆ ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿಯನ್ನು 2026-27ನೇ ಸಾಲಿಗೆ ಅನುಷ್ಠಾನ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಇನ್ಸೂರೆನ್ಸ್ ಕಂಪೆನಿಗಳು ರೈತರು ಮತ್ತು ಬೆಳೆಗಾರರಿಗೆ ಪಾವತಿಸುವ ಮೊತ್ತಕ್ಕೆ ಅನುಗುಣವಾಗಿ ವಿಮಾ ಕಂಪನಿಯ ನಿಯಮಗಳು, ಪ್ರೀಮಿಯಂ, ಕ್ಲೇಮ್ ಪ್ರಕ್ರಿಯೆ ಮತ್ತು ನಷ್ಟ ಪರಿಹಾರದ ಬಗ್ಗೆ ಸ್ಪಷ್ಟವಾದ ಮತ್ತು ನಿಖರವಾದ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಬೆಳೆ ವಿಮಾ ಯೋಜನೆಯ ಕುರಿತು ರೈತರಿಗೆ ಸಮರ್ಪಕ ಅರಿವು ಮೂಡಿಸಲು ಕೃಷಿ ಇಲಾಖೆ, ಸಹಕಾರ ಇಲಾಖೆ, ತೋಟಗಾರಿಗೆ ಇಲಾಖೆ, ಬ್ಯಾಂಕುಗಳು, ವಿಮಾ ಸಂಸ್ಥೆಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳು ಜಂಟಿಯಾಗಿ ಪ್ರಚಾರ ಕಾರ್ಯ ಕೈಗೊಳ್ಳಲಿದೆ. ಅಲ್ಲದೆ ಅಧಿಸೂಚಿತ ಗ್ರಾಮಗಳಲ್ಲಿ ಪೋಸ್ಟರ್ ಅಳವಡಿಕೆ, ಬ್ಯಾನರ್ ಪ್ರದರ್ಶನ, ರೈತರ ಸಭೆಗಳು ಹಾಗೂ ಇತರೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಬೆಳೆ ವಿಮಾ ಸಂಸ್ಥೆಗಳು ಯೋಜನೆ ಕುರಿತು ರೈತರಿಗೆ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಲಾಗುವುದು, ನೋಂದಾಯಿತ ರೈತರ ವಿಮಾ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸ್ವೀಕರಿಸುವುದು, ಹಾನಿ ವರದಿ ಬಂದ 48 ಗಂಟೆಯೊಳಗೆ ನಷ್ಟ ನಿರ್ಧಾರಕರನ್ನು ನಿಯೋಜಿಸುವುದು, ಅರ್ಹ ರೈತರಿಗೆ ವಿಮಾ ಪರಿಹಾರವನ್ನು ನಿಗದಿತ ಅವಧಿಯಲ್ಲಿ ಪಾವತಿಸಲಾಗುವುದು ಎಂದರು. ಬರ ಹಾಗೂ ಅತಿವೃಷ್ಟಿಯಿಂದ ಉಂಟಾಗುವ ಬೆಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಕೊಡಗು ಜಿಲ್ಲೆಯಲ್ಲಿ 2026-27ನೇ ಸಾಲಿನ `ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ ಅನುಷ್ಠಾನಕ್ಕೆ ಬಂದಿದೆ. ಜಿಲ್ಲೆಯ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಕೋರಿದರು. ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ಇಂಡಸ್ ಇಂಡ್ ಜನರಲ್ ಇನ್ಸೂರೆನ್ಸ್ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮುಂಗಾರು ಹಂಗಾಮಿನ ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ರೈತರ ವಿಮಾ ಕಂತನ್ನು ಶೇ. 2 ಎಂದು ನಿಗದಿಪಡಿಸಲಾಗಿದೆ. ಬೆಳೆ ಸಾಲ ಪಡೆದ ಹಾಗೂ ಪಡೆಯದ ಇಚ್ಛೆಯುಳ್ಳ ರೈತರು ರಾಷ್ಟ್ರೀಕೃತ ಬ್ಯಾಂಕ್, ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಾಲ ಪಡೆಯದ ರೈತರು ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಿದೆ ಎಂದರು. ಭತ್ತ (ನೀರಾವರಿ): ಎಕರೆಗೆ ರೂ. 879.01 ಕಂತು ಪಾವತಿಸಬೇಕು (ಕೊನೆಯ ದಿನಾಂಕ: 14.08.2026)., ಭತ್ತ (ಮಳೆಯಾಶ್ರಿತ): ಎಕರೆಗೆ ರೂ. 611.91 ಕಂತು ಪಾವತಿಸಬೇಕು (ಕೊನೆಯ ದಿನಾಂಕ: 14.08.2026). ಮುಸುಕಿನ ಜೋಳ (ಮಳೆಯಾಶ್ರಿತ): ಎಕರೆಗೆ ರೂ. 546.35 ಕಂತು ಪಾವತಿಸಬೇಕು (ಕೊನೆಯ ದಿನಾಂಕ: 31.07.2026), ಹೆಚ್ಚಿನ ಮಾಹಿತಿಗೆ ರೈತರು www.samrakshane.karnataka.gov.in ತಂತ್ರಾಂಶ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಹನಾ ಎಸ್. ಹಾದಿಮನಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶಶಿಧರ್, ಉಪ ಕೃಷಿ ನಿರ್ದೇಶಕರಾದ ಡಿ.ಎಸ್.ಸೋಮಶೇಖರ್, ಡಿಎಸ್‍ಒ ಡಿ.ನಾರಾಯಣ, ತೋಟಗಾರಿಕ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಡಿಡಿಎಲ್‍ಆರ್ ನಿರಂಜನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯ್ಕ್, ಡಿವೈಎಸ್‍ಪಿ ಪಿ.ಎ.ಸೂರಜ್ ಹಾಗೂ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ವಿದ್ಯಾರ್ಥಿಗಳಿಂದ ಎಸ್.ಐ.ಆರ್ ಜಾಗೃತಿ ಜಾಥಾ*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026

*ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*

ಜುಲೈ 2, 2026

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.2 NEWS DESK : ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ…

*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 2, 2026

*ಸುಂಟಿಕೊಪ್ಪ : ರಸ್ತೆಗುರುಳಿದ ಬೃಹತ್ ಮರ*

ಜುಲೈ 2, 2026

*ರಸ ಗೊಬ್ಬರ ಪೂರೈಕೆಯಲ್ಲಿ ರಾಜ್ಯದ ರೈತರಿಗೆ ಅನ್ಯಾಯ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪ*

ಜುಲೈ 2, 2026

*ಯುನೈಟೆಡ್ ಅರಬ್ ನಲ್ಲಿ ಕೊಡಗಿನ ರಿಯಾಝ್ “ಇತ್ತಿಹಾದ್” ರೈಲು ಸೇವೆಯ ಲೋಕೋ ಪೈಲಟ್*

ಜುಲೈ 2, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.6 ರಿಂದ 9 ರವರೆಗೆ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ*

ಜುಲೈ 2, 2026

ಬೈಲುಕುಪ್ಪೆಯಲ್ಲಿ ನಟ, ನಟಿಯರ ಆಯ್ಕೆ

ಜುಲೈ 2, 2026

*ಜು.6 ರಂದು ಮಡಿಕೇರಿಯಲ್ಲಿ ಬಿಜೆಪಿಯಿಂದ ಬೃಹತ್ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ*

ಜುಲೈ 2, 2026

*ಒಂದಕ್ಕಿoತ ಹೆಚ್ಚು ವೋಟರ್ ಐಡಿ : ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಿಎನ್‌ಸಿ*

ಜುಲೈ 2, 2026

*ಗ್ಯಾರಂಟಿ ಯೋಜನೆಗಳ ಮಡಿಕೇರಿ ತಾಲ್ಲೂಕು ಸಮಿತಿ ಸಭೆ : ಹಲವು ಫಲಾನುಭವಿಗಳಿಗೆ ಒಂದೇ ಖಾತೆಗೆ ಯೋಜನೆಯ ಧನಸಹಾಯ*

ಜುಲೈ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.