Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಚನ ಸಾಹಿತ್ಯಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ : ಕೆ.ಎಸ್.ಮೂರ್ತಿ*

ಜುಲೈ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.2 NEWS DESK : ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಚನ ಸಾಹಿತ್ಯವು 12ನೇ ಶತಮಾನದ ಶರಣರ ಚಿಂತನೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಭಂಡಾರವಾಗಿದೆ. ವಿದ್ಯಾರ್ಥಿಗಳು ವಚನಗಳನ್ನು ಮೈಗೂಡಿಸಿಕೊಳ್ಳಬೇಕು. ದಿನಕ್ಕೆ ಒಂದು ವಚನಗಳನ್ನಾದರೂ ಕಲಿತು ಅದರ ಮೆರುಗನ್ನು ಬದುಕಿನಲ್ಲಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಡಾ.ಫ.ಗು.ಹಳಕಟ್ಟಿ ಅವರು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವಚನ ಸಾಹಿತ್ಯದ ಅಧ್ಯಯನದಿಂದ ಅರಿವು ಜಾಗೃತಗೊಂಡು, ಬೆಳಕು ಮೂಡುತ್ತದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಶಿವಪ್ಪ ಅವರು, ಬಸವಾದಿ ಶರಣರು ರಚಿಸಿದ ವಚನಗಳು ಜಗತ್ತಿನಲ್ಲಿಯೇ ವಿಶಿಷ್ಟ ಹಾಗೂ ಅನನ್ಯ ಸಾಹಿತ್ಯವಾಗಿದೆ. 12ನೇ ಶತಮಾನದ ಶರಣರ ಪ್ರಮುಖ ವಚನಗಳನ್ನು ತಾಳೆಗರಿಗಳಿಂದ ಕಷ್ಟಪಟ್ಟು ಸಂಗ್ರಹಿಸಿ, ಸಂಪಾದಿಸಿ ಇಂದಿನ ಪೀಳಿಗೆಗೆ ತಲುಪಿಸಿದ ಡಾ. ಫ.ಗು. ಹಳಕಟ್ಟಿ ಅವರ ಅಪಾರ ಸೇವೆಯನ್ನು ಸ್ಮರಿಸಿದರು. ಅವರ ನಿರಂತರ ಪರಿಶ್ರಮವಿಲ್ಲದಿದ್ದರೆ ಇತಿಹಾಸದ ಅಮೂಲ್ಯ ವಚನ ಸಂಪತ್ತು ನಮಗೆ ಸಿಗುತ್ತಿರಲಿಲ್ಲ ಎಂದು ಹಳಕಟ್ಟಿಯವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ವಚನಗಳಲ್ಲಡಗಿರುವ ಜಾತ್ಯಾತೀತ ಹಾಗೂ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ಹೋಬಳಿ ಅಧ್ಯಕ್ಷರಾದ ಎಂ.ಎಸ್.ಮೂರ್ತಿ ಅವರು ಉಪನ್ಯಾಸ ನೀಡಿ, ಬಸವಾದಿ ಶರಣರ ವಚನಗಳನ್ನು ಆಧುನಿಕ ಕಾಲದಲ್ಲಿ ಜನಮನಕ್ಕೆ ತಲುಪಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಫ.ಗು.ಹಳಕಟ್ಟಿ ಅವರು ಕನ್ನಡದ ಸಾರಸತ್ವ ಲೋಕದ ಅಪ್ರತಿಮ ಸಂಶೋಧಕರು, ವಿದ್ವಾಂಸರು, ವಕೀಲರು ಹಾಗೂ ಸಹಕಾರ ಚಳುವಳಿಯ ಪ್ರವರ್ತಕರು ಆಗಿದ್ದರು. 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಮಹತ್ವ ಹೆಚ್ಚು ಜನರಿಗೆ ತಿಳಿಯಿತು ಎಂದರು. ಹಳಕಟ್ಟಿ ಅವರ ಬದುಕು, ಸಾಧನೆ ಕುರಿತು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು, ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಹಾಗೂ ಸಂಸ್ಕøತಿಯನ್ನು ತಿಳಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜು ಅವರು ವಚನ ಗಾಯನ ಹಾಡಿದರು. ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷರಾದ ವಿಜಯಲಕ್ಷ್ಮಿ, ಮಡಿಕೇರಿ ತಾಲ್ಲೂಕು ಶಿರಸ್ಥೆದಾರರಾದ ದೇವರಾಜು, ಕುಶಾಲನಗರ ಸೌಹಾರ್ಧ ಸಹಕಾರ ಸಂಘದ ಅಧ್ಯಕ್ಷರಾದ ಶಾಂಭಶಿವಮೂರ್ತಿ, ಬ್ಲಾಸಂ ಶಾಲೆಯ ಶಿಕ್ಷಕಿ ಸರೀನ, ವಿದ್ಯಾರ್ಥಿಗಳು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಅವರು ಸ್ವಾಗತಿಸಿದರು. ಮಣಜೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.08: ದೇಶದ ಸುರಕ್ಷತೆಗೆ ಸವಾಲಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡಗು…

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.