


ಮಡಿಕೇರಿ NEWS DESK ಜು.5 : ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಟಿ.ಆರ್.ಅರ್ಜುನ್ ಸೂರ್ಯ ಆಯ್ಕೆಯಾಗಿದ್ದಾರೆ. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ ಮತ್ತಿತರ ಪ್ರಮುಖರು ಆದೇಶ ಪತ್ರ ನೀಡಿದರು. ಸಭೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.









