
ಮಡಿಕೇರಿ NEWS DESK ಜು.6 : ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಮರ ಬಿದ್ದ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆಯ ಬೇಟೋಳಿ ಗ್ರಾಮದ ನಿವಾಸಿ ಸಿಂಧು ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಇವರ ಮೇಲೆ ಮರ ಬಿದ್ದಿದೆ. ವಿರಾಜಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ರಸ್ತೆ ಮೇಲೆ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳೀಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.









