ಮಡಿಕೇರಿ NEWS DESK ಜು.6 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ನಿವಾಸಿ ಹಾಗೂ ಶ್ರೀ ಕೋದಂಡ ರಾಮೋತ್ಸವ ಸಮತಿಯ ಪ್ರಮುಖ ಹೆಚ್.ಮಂಜುನಾಥ್ (47) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಮಂಜುನಾಥ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಜು.7 ರಂದು ನಡೆಯಲಿದೆ.







