
ಮಡಿಕೇರಿ NEWS DESK ಜು.7 : ಮುಂಗಾರು ಅವಧಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ಆದ್ದರಿಂದ ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ, 2005 ಸೆಕ್ಷನ್ 51(ಬಿ) ಮತ್ತು ಸಂಬಂಧಿತ ನಿಯಮ/ಕಾಯ್ದೆಗಳ ವಿವಿಧ ಕಲಂ ಗಳಡಿಯಲ್ಲಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.








