
ಮಡಿಕೇರಿ NEWS DESK ಜು.7 : ದಕ್ಷಿಣ ಕೊಡಗಿನ ಇತಿಹಾಸ ಪ್ರಸಿದ್ಧ ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ರಚನೆಗೊಂಡ ನೂತನ ಗರ್ಭಗುಡಿಯಲ್ಲಿ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವವು ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಊರ ಕೂಡುಕಟ್ಟಿನ ಯಜಮಾನತ್ವದಲ್ಲಿ ಆರಂಭಗೊoಡಿತು. ಸೋಮವಾರ ಸಂಜೆ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪುಣ್ಯಾಹ, ಪ್ರಸಾದ ಶುದ್ಧಿ, ವಾಸ್ತು ರಕ್ಕೋಘ್ನ ಹೋಮ, ವಾಸ್ತು ಬಲಿ ನಡೆಯಿತು. ಇಂದು ಗಣಪತಿ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, ದುರ್ಗಾ ನಮಸ್ಕಾರ ಪೂಜೆ, ಮಂಟಪ ಸಂಸ್ಕಾರ ಮತ್ತಿತರ ಧಾರ್ಮಿಕ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.9 ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.









