
ಮಡಿಕೇರಿ NEWS DESK ಜು.11 : ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಶೇಖರ್ ಹಾಗೂ ಜಾಜಿ ದಂಪತಿ ಪುತ್ರ ಕವನ್(24) ಮೃತ ಯುವಕ. ಶನಿವಾರ ಬೆಳಗ್ಗೆ ಕವನ್ ಮನೆಯಲ್ಲಿದ್ದ ಬಂದೂಕಿನಿAದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.









